ಚಿಕ್ಕಬಳ್ಳಾಪುರ: ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಡಿಯ ಆರ್ಥಿಕ ನೆರವು ಹೆಚ್ಚಳ ಮತ್ತು ಸಹಕಾರಿ ಬ್ಯಾಂಕ್‌ಗಳಿಗೆ ಅಧಿಕ ನೆರವು ಒದಗಿಸಲು ಸಂಸದ ಡಾ.ಕೆ.ಸುಧಾಕರ್ ನಬಾರ್ಡ್ ಗೆ ಮಾಡಿದ್ದಾರೆ.
ನಬಾರ್ಡ್ ಅಧ್ಯಕ್ಷ ಕೆ.ವಿ.ಶಾಜಿರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿರುವ ಅವರು, ಕರ್ನಾಟಕಕ್ಕೆ ಪ್ರಸಕ್ತ ಸಾಲಿನಲ್ಲಿ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯ ಮೊತ್ತವನ್ನು ಕನಿಷ್ಠ 3,500 ಕೋಟಿ ರೂಗೆ ಏರಿಸಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಸಹಕಾರಿ ಬ್ಯಾಂಕ್‌ಗಳು, ಮಹಿಳಾ ಸ್ವ-ಸಹಾಯ ಸಂಘಗಳ ಸಮಾಜದ ಸಬಲೀಕರಣದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು ಕೃಷಿ ಸಂಬಂಧಿತ ಚಟುವಟಿಕೆಗೆ ಅಪಾರ ನೆರವು ನೀಡುತ್ತಿವೆ. ಕಳೆದ ಸಾಲಿಗೆ ಹೋಲಿಸಿದ್ದಲ್ಲಿ ಈ ಬಾರಿ ಸಹಕಾರಿ ಬ್ಯಾಂಕ್‌ಗಳಿಗೆ ನೀಡುವ ನೆರವು ಶೇ.58 ಕಡಿಮೆಯಾಗಿದ್ದು, ಇದರ ಪ್ರಮಾಣವನ್ನು ಏರಿಸಬೇಕು ಎಂದು ಕೋರಿದ್ದಾರೆ.
*ಸಹಕಾರಿ ಬ್ಯಾಂಕ್ ಮಂಜೂರು
ಕೋಲಾರದಿಂದ ಚಿಕ್ಕಬಳ್ಳಾಪುರ ಪ್ರತ್ಯೇಕವಾಗಿ 18 ವರ್ಷ ಕಳೆದಿದ್ದರೂ ಜಿಲ್ಲೆಯಲ್ಲಿ ಪ್ರತ್ಯೇಕ ಸಹಕಾರಿ ಬ್ಯಾಂಕ್ ಇಲ್ಲ. ಇದರಿಂದಾಗಿ ಜನರ ಹಾಗೂ ರೈತರಿಗೆ ತೊಂದರೆಯಾಗಿದೆ. ಇದಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಬ್ಯಾಂಕ್ ಮಂಜೂರಾತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಮನವಿ ಮಾಡಿದ್ದಾರೆ.