ಚಿಕ್ಕಬಳ್ಳಾಪುರ: ಕಪ್ಪು ಹಲಗೆಯ ಮೇಲೆ ಡೆತ್ನೋಟ್ ಬರೆದು ಅನುದಾನಿತ ಶಾಲೆಯ ಶಿಕ್ಷಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗೌರಿಬಿದನೂರು ತಾಲ್ಲೂಕಿನ ಕನಗಾನಕೊಪ್ಪ ಗ್ರಾಮದ ಚಂದ್ರಶೇಖರ್(೩೨) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ. ಚಂದ್ರಶೇಖರ್ ಮಂಚೇನಹಳ್ಳಿಯ ಅನುದಾನಿತ ಆಚಾರ್ಯ ಪ್ರೌಢಶಾಲೆಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.
ಶಾಲಾ ಆಡಳಿತ ಮಂಡಳಿ ಅನುದಾನಿತ ಶಿಕ್ಷಕನಾಗಿ ಅನುಮೋದನೆ ಮಾಡದ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಆಚಾರ್ಯ ಪ್ರೌಢಶಾಲೆ ಆಡಳಿತ ಮಂಡಳಿ ಕಾರಣ ಎಂದು ಕಪ್ಪು ಹಲಗೆಯ ಮೇಲೆ ಡೆತ್ನೋಟ್ ಬರೆಯಲಾಗಿದೆ.
ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. (ದಿಗ್ವಿಜಯ ನ್ಯೂಸ್)