ಪೋಕ್ಸೋ ಪ್ರಕರಣ ಸಾಂದರ್ಭಿಕ ಚಿತ್ರ 
ಚಿಕ್ಕಬಳ್ಳಾಪುರ

ಎಂಟನೇ ತರಗತಿ ಬಾಲಕಿ ಗರ್ಭಿಣಿ, ಆರೋಪಿಯ ಬಂಧನ

ಚಿಕ್ಕಬಳ್ಳಾಪುರ:೧೩ ವರ್ಷದ ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ವ್ಯಕ್ತಿಯನ್ನು ಬಂಧಿಸಿ, ಪೊಲೀಸರು ಪೋಕ್ಸೋಪ್ರಕರಣ ದಾಖಲಿಸಿದ್ದಾರೆ.

ಬಂಧಿತಶಿಡ್ಲಘಟ್ಟ ತಾಲೂಕಿನ ಚರಣ್‌ (೨೫) ಎಂಬುದಾಗಿ ಗುರುತಿಸಲಾಗಿದೆ. ೮ ನೇ ತರಗತಿಯಲ್ಲಿ ಓದುತ್ತಿದ್ದಬಾಲಕಿಯು ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಪಾಲಕರು ಚಿಂತಾಮಣಿಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ತಪಾಸಣೆ ಕೈಗೊಂಡ ವೈದ್ಯರಿಗೆ ಬಾಲಕಿಗರ್ಭಿಣಿಯಾಗಿರುವುದು ಗೊತ್ತಾಗಿದೆ. ತಕ್ಷಣ ಶಿಡ್ಲಘಟ್ಟಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದಾರೆ. ಇದರಿಂದ ತನಿಖೆ ಕೈಗೊಂಡ ಪೊಲೀಸರು ಚರಣ್‌ ಎಂಬುವವರನ್ನುಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಬಾಲಕಿಹಾಗೂ ಆರೋಪಿಯು ಒಂದೇ ಸಮುದಾಯಕ್ಕೆ ಸೇರಿದವರು. ಇದರ ನಡುವೆ ಬಾಲಕಿಯನ್ನು ಬೆದರಿಸಿ, ಅತ್ಯಾಚಾರವೆಸಗಿದ್ದಾನೆ.ಅಮಾಯಕಿ ಸಂತ್ರಸ್ಥೆ ನೋವಿನಲ್ಲಿ ಸುಮ್ಮನಿದ್ದಳು ಎನ್ನುವುದು ತಿಳಿದು ಬಂದಿದೆ. ಪೊಲೀಸರು ವೈದ್ಯಕೀಯವರದಿ ಹಾಗೂ ಇತರೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ತನಿಖೆ ಕೈಗೊಂಡಿದ್ದಾರೆ.