ಚಿಂತಾಮಣಿಯಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡಿ ಸಿಕ್ಕಿಹಾಕಿಕೊಂಡಿರುವ ಆರೋಪಿ ಮಂಜುನಾಥ್ ಮತ್ತು ಮಾಲು ವಾಹನ.
- ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಆರೋಪ
- ಸೊಣ್ಣಶೆಟ್ಟಿಹಳ್ಳಿ ಬಡಾವಣೆಯ ನಿವಾಸಿ ಮಂಜುನಾಥ (40) ಎಂಬಾತನನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿಶೇಷ ತಂಡ ವಶಕ್ಕೆ
ಚಿಂತಾಮಣಿ: ನಗರದಿಂದ ಗ್ರಾಮಾಂತರ ಪ್ರದೇಶಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಆರೋಪದಲ್ಲಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯ ನಿವಾಸಿ ಮಂಜುನಾಥ (40) ಎಂಬಾತನನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್
ವರಿಷ್ಠಾಧಿಕಾರಿಗಳ ವಿಶೇಷ ತಂಡ ವಶಕ್ಕೆ ಪಡೆದಿದೆ.
ಬಂಧಿತನಿಂದ ಸುಮಾರು 61 ಲೀಟರ್ ಮದ್ಯ, ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿಕೊಂಡಿದೆ. ಹಳ್ಳಿಗಳಿಗೆ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದ ಬಗ್ಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಕೋಲಾರ ರಸ್ತೆಯ
ಅಶ್ವತ್ಥಕಟ್ಟೆ ಬಳಿ ದಾಳಿದೆ. ಆರೋಪಿಯನ್ನು ಚಿಂತಾಮಣಿ ನಗರ ಠಾಣೆ ಪೊಲೀಸರು ವಶಕ್ಕೆ ನೀಡಲಾಗಿದೆ.