ಮೂವರು ಆರೋಪಿಗಳನ್ನು ಬಂಧಿಸಿರುವ ಬಾಗೇಪಲ್ಲಿ ಠಾಣೆ ಪೊಲೀಸರು
- ಮೂವರು ಆರೋಪಿಗಳನ್ನು ಬಂಧಿಸಿರುವ ಬಾಗೇಪಲ್ಲಿ ಠಾಣೆ ಪೊಲೀಸರು
- ಎರಡು ಲಕ್ಷ ರೂ. ಮೌಲ್ಯದ ಮಾದಕ ವಸ್ತುವನ್ನು ವಶಕ್ಕೆ
- ಸರ್ಕಲ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ
ಬಾಗೇಪಲ್ಲಿ: ಗಾಂಜಾ ಅಕ್ರಮ ಮಾರಾಟ ದಂಧೆಯಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಬಾಗೇಪಲ್ಲಿ ಠಾಣೆ ಪೊಲೀಸರು, ಎರಡು ಲಕ್ಷ ರೂ. ಮೌಲ್ಯದ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ವಡ್ರಪಾಳ್ಯ ಗ್ರಾಮದ ನಾರಾಯಣಪ್ಪ, ಗೌರಿಬಿದನೂರು ತಾಲೂಕಿನ ಬಿಸಲಹಳ್ಳಿ ಲೋಕೇಶ್, ಗೌರಿಬಿದನೂರಿನಹರ್ಷ ಬಂಧಿತರು. ಬಾಗೇಪಲ್ಲಿ ತಾಲೂಕಿನ ಪರಗೋಡು ಗ್ರಾಮದ ಬಳಿಯ ಖಾಸಗಿ ಲೇಔಟ್ನಲ್ಲಿ ಗುರುವಾರ ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ಗಳಾದ ಸುನೀಲ್ ಕುಮಾರ್, ಮುನಿರತ್ನಂ, ಸಿಬ್ಬಂದಿಗಳಾದ ಸುರೇಶ್, ನಾಗಾರ್ಜುನ, ವೆಂಕಟಶಿವ, ಕೃಷ್ಣ, ರಾಜಪ್ಪ, ಶಂಕರಪ್ಪ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದರು.