ಗುಡಿಬಂಡೆ ತಾಲೂಕು ಕಚೇರಿ ಮುಂಭಾಗ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೇಶವರೆಡ್ಡಿ, ಮುಖಂಡ ಎಚ್.ಪಿ.ಲಕ್ಷಿ$್ಮನಾರಾಯಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿರೆಡ್ಡಿ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಬಾಲೇನಹಳ್ಳಿ ರಮೇಶ್ ಇದ್ದರು.
- ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೇಶವರೆಡ್ಡಿ ಆರೋಪ
- ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನ
- ಅನೇಕ ವಸ್ತುಗಳ ಮೇಲೆ ತೆರಿಗೆ
ವಿಜಯವಾಣಿ ಸುದ್ದಿಜಾಲ ಗುಡಿಬಂಡೆ
ಬಿಜೆಪಿ ಕಳ್ಳ ಮತ ಪಡೆದು ಅಧಿಕಾರಕ್ಕೆ ಬಂದಿದ್ದಲ್ಲದೆ, ಸುಳ್ಳು ಆಶ್ವಾಸನೆ ನೀಡುತ್ತಾ ಬಂದಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೇಶವರೆಡ್ಡಿ ಆರೋಪಿಸಿದರು.
ಪಟ್ಟಣದ ತಾಲೂಕು ಕಚೇರಿ ಮುಂಭಾಗದ ಕಾಂಗ್ರೆಸ್ ಸಮಿತಿ ಕಚೇರಿಯಿಂದ ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನದಲ್ಲಿ ಶುಕ್ರವಾರ ಮಾತನಾಡಿ, ಜಿಎಸ್ಟಿ ಜಾರಿಗೆ ತಂದು ಅನೇಕ ವಸ್ತುಗಳ ಮೇಲೆ ತೆರಿಗೆ ವಿಧಿಸಿತು. ನಂತರ ಜನರಿಗೆ ತೊಂದರೆಯಾಗುತ್ತಿದೆ ಎಂದು ಜಿಎಸ್ಟಿ ಕಡಿಮೆಗೊಳಿಸಿರುವುದಾಗಿ ಹೇಳಿದ್ದಾರೆ. ದೇಶದಲ್ಲಿ ಸಂವಿಧಾನ ಉಳಿಯಬೇಕಾದರೆ ಮತಗಳ್ಳತನದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ತೋಲಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ನಾಗರಿಕನ ಹಕ್ಕು. ಪ್ರತಿಯೊಬ್ಬರು ಜಾಗೃತರಾಗಬೇಕು. ಹಾಗಾಗಿ ಕಾಂಗ್ರೆಸ್ ವರಿಷ್ಠರು ಪ್ರತಿ ಬೂತ್ಗೂ ಬಿಎಲ್ಒ ನೇಮಕ ಮಾಡಿ ಮತದಾರರನ್ನು ಜಾಗೃತರನ್ನಾಗಿ ಮಾಡುವಂತೆ ತಿಳಿಸಿದ್ದು, ಮತದಾರರಿಂದ ಸಹಿ ಅಭಿಯಾನ ಪ್ರಾರಂಭಿಸಲಾಗಿದೆ. ತಾಲೂಕಿನ ಎಲ್ಲ ಮುಖಂಡರು, ಮತದಾರರಿಂದ ಸಹಿ ಸಂಗ್ರಹಿಸಬೇಕು ಎಂದರು.
ಕಾಂಗ್ರೆಸ್ ಮುಖಂಡ ಎಚ್.ಪಿ.ಲಕ್ಷಿ$್ಮನಾರಾಯಣ ಮಾತನಾಡಿ, ಚುನಾವಣಾ ಆಯೋಗದ ಅಕ್ರಮ ವಿರೋಧಿಸಿ ತಾಲೂಕಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶದಂತೆ ಸಹಿ ಸಂಗ್ರಹ ಮಾಡಲಾಗುತ್ತಿದೆ. ಚುನಾವಣೆ ಆಯೋಗ ಕೇಂದ್ರದ ಬಿಜೆಪಿ ಸರ್ಕಾರದ ಜತೆಗೂಡಿ ಅನೇಕ ಅಕ್ರಮ ಮಾಡುತ್ತಿದೆ. ಜನಾದೇಶ ತಿರುಚುವ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ. ಮತಗಳ್ಳತನತಡೆಯುವ ಬಗ್ಗೆ ಧ್ವನಿ ಎತ್ತುವ ರಾಹುಲ್ ಗಾಂಧಿ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದರು.
ನಿಲ್ಲಿಸಿ ನಿಲ್ಲಿಸಿ ಮತ ಕಳ್ಳತನ ನಿಲ್ಲಿಸಿ ಎಂಬ ಘೋಷಣೆಗಳನ್ನು ಕೂಗಿ, ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು.
ಪಿಎಲ್ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಪ್ರಕಾಶ್, ಪ್ರಚಾರ ಸಮಿತಿ ಸದಸ್ಯರಾದ ದಪ್ಪರ್ತಿ ನಂಜುಂಡಪ್ಪ, ಬಾಗೇಪಲ್ಲಿ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷ ನವೀನ್, ಮುಖಂಡರಾದ ಅಂಬರೀಶ್, ರಾಜೇಶ್ ಇದ್ದರು.