ಚಿಂತಾಮಣಿ ಪಾಲಿಟೆಕ್ನಿಕ್ ಮುಖ್ಯರಸ್ತೆಯಲ್ಲಿ ಬೆಳಗಿನ ಜಾವ ಬೀದಿನಾಯಿಗಳು.
ಚಿಂತಾಮಣಿ: ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ನಾಗರಿಕರು ಭೀತಿಯಲ್ಲಿ ಬದುಕುವಂತಾಗಿದೆ. ರಸ್ತೆ ಮತ್ತು ಬಡಾವಣೆಗಳಲ್ಲಿ ನಾಯಿಗಳ ಹಿಂಡು ಹಿಂಡಾಗಿ ಅಡ್ಡಾಡುತ್ತಿದ್ದು, ದಾರಿಹೋಕರು ಮತ್ತು ವಾಹನ ಸವಾರರು ಆತಂಕ ಎದುರಿಸುತ್ತಿದ್ದಾರೆ.
ಬೀದಿ ನಾಯಿಗಳ ದಾಳಿಯಿಂದ ಹಲವರು ಗಾಯಗೊಂಡಿದ್ದಾರೆ. ನಗರಸಭೆಯಿಂದ ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಲು ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನೀಡುವ ಯೋಜನೆಗಳು ಸರಿಯಾಗಿ ಅನುಷ್ಠಾನಗೊಳ್ಳುತ್ತಿಲ್ಲ.ನಗರದಲ್ಲಿ ತ್ಯಾಜ್ಯ ವಿಲೇವಾರಿ ಸರಿಯಾಗಿ ಆಗದಿರುವುದು ನಾಯಿಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ.
ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನೀಡುವ ಕಾರ್ಯ ಅನುಷ್ಠಾನಗೊಳಿಸಬೇಕು. ನಗರದಲ್ಲಿ ತ್ಯಾಜ್ಯ ವಿಲೇವಾರಿ ಸುಧಾರಿಸಬೇಕು. ನಾಯಿಗಳಿಗೆ ಆಹಾರ ಲಭ್ಯವಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರಿಗೆ ಬೀದಿ ನಾಯಿಗಳ ಬಗ್ಗೆ ಜಾಗೃತಿ ಮೂಡಿಸಬೇಕು.