ಗೌರಿಬಿದನೂರು ನಗರದ ವಿವೇಕಾನಂದ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಎನ್.ಗಣೇಶ್ ಅವರನ್ನು ಸನ್ಮಾನಿಸಲಾಯಿತು. ಟಿಪಿ ದಿನೇಶ್ ಕುಮಾರ್, ಸಿಎನ್ ನಂಜೇಗೌಡ, ವಕೀಲರಾದ ವಿ. ಗೋಪಾಲ್, ಬಿ.ನಿಂಗಪ್ಪ ಇದ್ದರು.
- ಪ್ರಧಾನ ಸಿವಿಲ್ ನ್ಯಾಯಾಧೀಶ ಎನ್.ಗಣೇಶ್ ಅನಿಸಿಕೆ
- ಪ್ರಧಾನ ಸಿವಿಲ್ ನ್ಯಾಯಾಧೀಶ ಎನ್.ಗಣೇಶ್ ಹೇಳಿಕೆ
- ಕಾನೂನು ಸೇವಾ ಸಮಿತಿ, ವಕೀಲರ ಸಂ, ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಕಾನೂನು ಸೇವಾ ದಿನ ಮತ್ತು ಮಕ್ಕಳ ದಿನ
ವಿಜಯವಾಣಿ ಸುದ್ದಿಜಾಲ ಗೌರಿಬಿದನೂರು
ಶಿಕ್ಷಣ ಮಕ್ಕಳ ಅಭಿವದ್ಧಿಗೆ ಪೂರಕ ಎಂಬುವ ಬಗ್ಗೆ ಇಂದಿನ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡುವದು ಅವಶ್ಯ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ
ನಗರದ ವಿವೇಕಾನಂದ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂ, ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಕಾನೂನು ಸೇವಾ ದಿನ ಮತ್ತು ಮಕ್ಕಳ ದಿನ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಮಾನವೀಯ ಮೌಲ್ಯ ಮೈಗೂಡಿಸಿಕೊಳ್ಳಬೇಕು. ಮಕ್ಕಳ ಬೌದ್ಧಿಕ ವಿಕಾಸದಲ್ಲಿ ಪಾಲಕರು ಮತ್ತು ಶಿಕ್ಷಕರ ಪಾತ್ರ ಬಹಳಷ್ಟಿದೆ. ಅವರ ಅಭಿವೃದ್ಧಿಗೆ ಸರ್ಕಾರ ನಾನಾ ಯೋಜನೆ ಜಾರಿಗೊಳಿಸಿದೆ. ಎಳೆಯ ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆಗೆ ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ಪಾಲಕರು
ಇದನ್ನು ಬಳಸಿಕೊಳ್ಳಬೇಕು ಎಂದರು.
ವಕೀಲ ಸಂದ ಅಧ್ಯಕ್ಷ ಟಿ.ಪಿ.ದಿನೇಶ್ ಕುಮಾರ್ ಮಾತನಾಡಿ, ಕಾನೂನು ಸೇವೆಗಳ ದಿನದಂದು ಕಾನೂನು ಜಾಗೃತಿ ಶಿಬಿರ, ಉಚಿತ ಕಾನೂನು ಸೇವೆಗಳ ನೆರವಿನ ಲಭ್ಯತೆ ಬಗ್ಗೆ ಜನರಿಗೆ ಅರಿವು ಮೂಡಿಸಲಾಗುವುದು. ವ್ಯಕ್ತಿ ಬಡವನಾಗಿರಲಿ, ದುರ್ಬಲ ವರ್ಗದವನಾಗಿರಲಿ ಎಲ್ಲರಿಗೂ ನ್ಯಾಯ ಪಡೆಯುವ ಸಮಾನ ಅವಕಾಶವಿದೆ. ಅವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಲು ಉಚಿತ ಕಾನೂನು ನೆರವು ಮತ್ತು ಸಮಾಲೋಚನೆ ನೀಡಲಾಗುತ್ತದೆ ಎಂದರು.
ಸಂಪನ್ಮೂಲ ವ್ಯಕ್ತಿ ವಕೀಲ ವಿ.ಗೋಪಾಲ್ ಮಕ್ಕಳು ಹಕ್ಕು, ಸಾಮಾಜಿಕ ಕಾರ್ಯ ಕೈಗೊಳ್ಳಲು ಕಾನೂನಿನ ಸಾಮಾನ್ಯ ಜ್ಞಾನ ಅವಶ್ಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.ಶಾಲೆಯ ಸಂಯೋಜಕ ವರದರಾಜು ಮಾತನಾಡಿದರು.ಸಹಾಯಕ ಸರ್ಕಾರಿ ಅಭಿಯೋಜಕ ಫಯಾಜ್ ಪಟೇಲ್, ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸಿಎನ್ ನಂಜೇಗೌಡ, ವಕೀಲ ಬಿ.ಲಿಂಗಪ್ಪ, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರವಿ ಇದ್ದರು.