ಚಿಂತಾಮಣಿಯ ಕೈವಾರದ ಗುರುಪೂಜಾ ಸಂಗೀತೋತ್ಸವದ ಹಿನ್ನೆಲೆ ಚಿಂತಾಮಣಿ&ಬೆಂಗಳೂರು ರಸ್ತೆಯ ಕೈವಾರ ಕ್ರಾಸ್ನಲ್ಲಿ ಬೃಹತ್ ಸ್ವಾಗತ ಕಾಮಾನು ಅಳವಡಿಸಲಾಗಿದೆ.
- ಕೈವಾರದ ಸಂಗೀತೋತ್ಸವಕ್ಕೆ ಭರದ ಸಿದ್ಧತೆ
ಚಿಂತಾಮಣಿ: ತಾಲೂಕಿನ ಕೈವಾರದ ಶ್ರೀ ಯೋಗಿನಾರೇಯಣ ಮಠದಲ್ಲಿ ಗುರುಪೌರ್ಣಿಮೆ ಅಂಗವಾಗಿ ಜು.27ರಿಂದ ಪ್ರಾರಂಭವಾಗಲಿರುವ ಗುರುಪೂಜಾ ಮಹೋತ್ಸವ ಹಾಗೂ ಸಂಗೀತೋತ್ಸವಕ್ಕೆ ಭರದ ಸಿದ್ಧತೆ ನಡೆದಿವೆ.
ಕೈವಾರ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ೇತ್ರ ಆಷಾಢ ಹುಣ್ಣಿಯ ದಿನಗಳಲ್ಲಿ ಸಿಂಗರಿಸಿಕೊಳ್ಳುತ್ತದೆ. ಗುರುಪೂರ್ಣಿಮೆ ಹಿನ್ನೆಲೆಯಲ್ಲಿ ವಿಶೇಷವಾಗಿ ಗುರುಪೂಜೆ ಹಾಗೂ 72 ಗಂಟೆಗಳ ನಿರಂತರ ಸಂಗೀತೋತ್ಸವ ಹಮ್ಮಿಕೊಳ್ಳಲಾಗುತ್ತದೆ.
ಗುರುಪೂಜಾ ಸಂಗೀತೋತ್ಸವಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ವಿಶಾಲವಾದ ಪೆಂಡಾಲ್ ಹಾಕಲಾಗುತ್ತಿದೆ. ದೇವಾಲಯಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿದೆ.
ಜು.27ರಂದು ಬೆಳಗ್ಗೆ 5.30ಕ್ಕೆ ಂಟಾನಾದ, ಸುಪ್ರಭಾತ ಹಾಗೂ ಗೋಪೂಜೆ ಯೊಂದಿಗೆ ಪೂಜಾಕೈಂಕರ್ಯಗಳು ಆರಂಭವಾಗುತ್ತದೆ. ಬೆಳಗ್ಗೆ ಸದ್ಗುರು ತಾತಯ್ಯನವರಿಗೆ ವಿಶೇಷ ಅಭಿಷೇಕಸಲ್ಲಿಸಿ, ಮಂಗಳಾರತಿ ಮಾಡಲಾಗುತ್ತದೆ. ಧರ್ಮಾಧಿಕಾರಿ ಡಾ.ಎಂ.ಆರ್.ಜಯರಾಮ್ ಅವರ ನೇತೃತ್ವದಲ್ಲಿ ಸಾಮೂಹಿಕ ನಾಮಸಂಕೀರ್ತನೆಯೊಂದಿಗೆ ಸಂಗೀತೋತ್ಸವಕ್ಕೆ ಚಾಲನೆ ದೊರೆಯಲಿದೆ. ನಂತರ ವಿವಿಧ ಕಲಾವಿದರಿಂದ ಸಂಗೀತದ ಸಮರ್ಪಣೆಯಾಗುತ್ತದೆ. ಸಂಜೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಸೋಮವಾರದಿಂದ ಪ್ರಾರಂಭವಾಗುವ ಸಂಗೀತೋತ್ಸವವು ಜು.30(ಗುರುವಾರ)ರ ಬೆಳಗ್ಗೆ 6ಕ್ಕೆ ಮುಕ್ತಾಯವಾಗುತ್ತದೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಕಲಾವಿದರೊಂದಿಗೆ ನಾಡಿನ ಪ್ರಸಿದ್ಧ ಸಂಗೀತಗಾರರು ಭಾಗವಹಿಸುವರು. ಕರ್ನಾಟಕ ಸೇರಿದಂತೆ ನೆರೆಯ ಆಂಧ್ರ, ತಮಿಳುನಾಡಿನಿಂದಲೂ ಸಹಸ್ರಾರು ಸಂಖ್ಯೆಯಲ್ಲಿ ಭಜನಾ ಭಕ್ತರ ತಂಡಗಳು ಭಾಗವಹಿಸಲಿದ್ದು, ಈ ಮೂರು ದಿನಗಳವರೆಗೆ ಸಾಮೂಹಿಕ ಭಜನೆ, ನಾದಸ್ವರ, ಹರಿಕಥೆ, ಬುರ್ರಕಥೆ, ಸಂಗೀತ ಕಛೇರಿ, ಭರತನಾಟ್ಯ, ಕಥಾಕೀರ್ತನೆ, ವೀಣಾವಾದನ, ಕೊಳಲುವಾದನ, ವೀರಗಾಸೆ, ಡೊಳ್ಳುಕುಣಿತ, ಪಂಡರಿ ಭಜನೆ, ಕೋಲಾಟ, ತೊಗಲುಬೊಂಬೆ ಇತ್ಯಾದಿ ನಾನಾ ಪ್ರಕಾರದ ಕಲೆಗಳು ತಾತಯ್ಯನವರಿಗೆ ಸಮರ್ಪಣೆಯಾಗಲಿದೆ.