ಕೊಳ್ಳೇಗಾಲ ತಾಲೂಕಿನ ತೇರಂಬಳ್ಳಿ ಗ್ರಾಮದ ಬಳಿ ಎರಡು ಕಾರಿನ ನಡುವೆ ಅಪಘಾತ ಸಂಭವಿಸಿರುವುದು. 
ಚಿಕ್ಕಬಳ್ಳಾಪುರ

ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಾಯ

ಕೊಳ್ಳೇಗಾಲ: ತಾಲೂಕಿನ ತೇರಂಬಳ್ಳಿ ಗ್ರಾಮದ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಕಲಬುರಗಿಯ ಸಂತೋಷ್ ಗಾಜರಿ, ಶಿಡ್ಲಘಟ ವೆಂಕಟರೆಡ್ಡಿ, ಹುಣಸೂರು ತಾಲೂಕು ಸೋಮನಹಳ್ಳಿ ಮಧು ಹಾಗೂ ಹನೂರು ತಾಲೂಕಿನ ಶಾಗ್ಯ ಗ್ರಾಮದ ಜಯಂತ್ ಗಾಯಗೊಂಡವರು.
ಇವರಲ್ಲಿ ಸಂತೋಷ್, ವೆಂಕಟರೆಡ್ಡಿ, ಮಧು ಮೂವರು ಮೈಸೂರಿನಿಂದ ಕೊಳ್ಳೇಗಾಲದ ಹಂಪಾಪುರ ಬಳಿ ಕಾಮಗಾರಿ ನಡೆಯುತ್ತಿರುವ ಲೇಔಟ್ ಸ್ಥಳಕ್ಕೆ ಕಾರಿನಲ್ಲಿ ಬರುತ್ತಿರುವಾಗ ಶಾಗ್ಯದಿಂದ ಮೈಸೂರಿಗೆ ಹೋಗುತ್ತಿದ್ದ ಜಯಂತ್ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ವೇಳೆ ಎರಡು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಆಂಬ್ಯುಲೆನ್ಸ್ ಕರೆಯಿಸಿ ಗಾಯಾಳುಗಳನ್ನು ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕಳುಹಿಸಲಾಯಿತು. ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.