ಬಡ ವಿದ್ಯಾರ್ಥಿಗಳ ಆಹಾರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವ ಮುಖ್ಯಶಿಕ್ಷಕನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಎಸ್​ಎ್​ಐ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಬಾಗೇಪಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದು ಪ್ರತಿಭಟನೆ ನಡೆಸಿದರು. 
ಚಿಕ್ಕಬಳ್ಳಾಪುರ

ಕಾಳಸಂತೆಯಲ್ಲಿ ಬಿಸಿಯೂಟ ಆಹಾರ ಪದಾರ್ಥ ಮಾರಾಟ

ಪ್ರಮುಖ ಮುಖ್ಯಾಂಶಗಳು

  • ಮುಖ್ಯಶಿಕ್ಷಕನ ವಿರುದ್ಧ ಕಾನೂನು ಕ್ರಮಕ್ಕೆ ಪಟ್ಟು
  • ವಿದ್ಯಾರ್ಥಿಗಳಿಗೆ ಕಳಪೆ ಊಟ ಪೂರೈಕೆ
  • ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದೆ ಪ್ರತಿಭಟನೆ
ವಿಜಯವಾಣಿ ಸುದ್ದಿಜಾಲ ಬಾಗೇಪಲ್ಲಿ
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳ ಆಹಾರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವ ಮುಖ್ಯಶಿಕ್ಷಕನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಎಸ್​ಎ್​ಐ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದೆ ಪ್ರತಿಭಟನೆ ನಡೆಸಿದರು.
ಕ್ಷೇತ್ರ ಎಸ್​ಎಫ್​ಐ ಮುಖಂಡ ಸೋಮಶೇಖರ್​ ಮಾತನಾಡಿ, ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಕುರಿತಂತೆ ತನಿಖೆ ನಡೆಸಬೇಕು ಹಾಗೂ ಶಾಲೆಯ ಪಡಿತರ ಪದಾರ್ಥಗಳು, ಪೌಷ್ಟಿಕ ಆಹಾರ, ಬಾಳೆಹಣ್ಣು, ಮೊಟ್ಟೆಯನ್ನು ವಿದ್ಯಾರ್ಥಿಗಳಿಗೆ ನೀಡದೆ ಕಾಳಸಂತೆಯಲ್ಲಿ ಮಾರಾಟ ಮಾಡಿಕೊಳ್ಳುತ್ತಿರುವ ಮುಖ್ಯ ಶಿಕ್ಷಕ ವಿ.ವೆಂಕಟೇಶ್​ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ನೀಡಿರುವ ಆಹಾರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ ಬಡಮಕ್ಕಳಿಗೆ ಅನ್ಯಾಯ ಮಾಡುತ್ತಿರುವ ದೃಶ್ಯಗಳು ಶಾಲೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಇದರ ಆಧಾರದ ಮೇರೆಗೆ ಪಡಿತರ ಪದಾರ್ಥಗಳ ಅವ್ಯವಹಾರದ ಕುರಿತಂತೆ ತನಿಖೆಯಾಗಬೇಕು. ಅವರೊಂದಿಗೆ ಕೈಜೋಡಿಸಿರುವ ಡಿ ಗ್ರೂಪ್​ ನೌಕರರ ವಿರುದ್ಧವೂ ಕಾನೂನು ಕ್ರಮ ಜರುಗಿಸಿ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.
ತಿಂಗಳ ಹಿಂದೆ ಉಪ ನಿರ್ದೇಶಕರಿಗೆ ಮತ್ತು ೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ ಕನಿಷ್ಠ ಅಧಿಕಾರಿಗಳ ತಂಡ ಇದುವರೆಗೂ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸುವ ಕೆಲಸ ಮಾಡಿಲ್ಲ. ಹುಳು ಬಿದ್ದಿರುವ ಬಿಸಿಯೂಟ ನೀಡುತ್ತಿರುವ ಹಾಗೂ ಮೊಟ್ಟೆ, ಬಾಳೆಹಣ್ಣು ಅಸಮರ್ಪಕ ವಿತರಣೆ ಬಗ್ಗೆ ವಿದ್ಯಾರ್ಥಿಗಳು ಅಡುಗೆ ಸಿಬ್ಬಂದಿಯನ್ನು ಪ್ರಶ್ನಿಸಿದರೆ ವಿದ್ಯಾರ್ಥಿಗಳನ್ನು ಕೊಠಡಿಯಲ್ಲಿ ಕೂಡಿಹಾಕಿ ಮನಬಂದಂತೆ ಥಳಿಸಿ ಶಾಲೆಯಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ಹೊರಗಡೆ ಮಾತನಾಡದಂತೆ ಭಯಹುಟ್ಟಿಸುವ ಕೆಲಸವನ್ನು ಸಿಬ್ಬಂದಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸರ್ಕಾರಿ ಬಾಲಕರ ಪ್ರೌಢ ಶಾಲೆಯಲ್ಲಿ 280 ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಗಳಿಗೆ ಶೌಚಗೃಹ,ಕುಡಿಯುವ ನೀರು ಸೇರಿದಂತೆ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸಲು ಶಾಲೆ ಆಡಳಿತ ಮಂಡಳಿ ಸಂಪೂರ್ಣ ವಿಫಲವಾಗಿದೆ. ಈ ಬಗ್ಗೆ ೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದರೂ ಸಮಸ್ಯೆಗೆ ಪರಿಹಾರ ಕಲ್ಪಿಸಿಲ್ಲ ಎಂದರು. ಈ ಪ್ರತಿಭಟನೆಯಲ್ಲಿ ಸರ್ಕಾರಿ ಬಾಲಕರ ಪ್ರೌಢ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹುಳು ಬಿದ್ದಿರುವ ಪದಾರ್ಥಗಳಿಂದ ಸಿದ್ಧಪಡಿಸಿರುವ ಮಧ್ಯಾಹ್ನದ ಬಿಸಿಯೂಟ ತಿನ್ನುವಂತೆ ಮುಖ್ಯಶಿಕ್ಷಕರು ಒತ್ತಾಯ ಮಾಡುತ್ತಾರೆ.ತಿನ್ನದಿದ್ದರೆ ಅಡುಗೆ ಸಿಬ್ಬಂದಿ ಭಯ ಹುಟ್ಟಿಸುತ್ತಾರೆ. ಮಾತು ಕೇಳದಿದ್ದರೆ ಕೊಠಡಿಯೊಳಗೆ ಕೂಡಿ ಹಾಕಿ ಮನಬಂದಂತೆ ಥಳಿಸುತ್ತಾರೆ.
| ಹೆಸರು ಹೆಳಲು ಇಚ್ಚಿಸದ ವಿದ್ಯಾರ್ಥಿ, ಬಾಗೇಪಲ್ಲಿ.