ಚಿಂತಾಮಣಿ ತಾಲೂಕಿನ ಕೋರ್ಲಪರ್ತಿ ಗ್ರಾಪಂ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಸಂತೆಯಲ್ಲಿ ಮಹಿಳಾ ಸಂಘಗಳ ಉತ್ಪನ್ನಗಳ ಮಳಿಗೆಗೆ ಗ್ರಾಪಂ ಅಧ್ಯಕ್ಷ ವೈ.ವೆಂಕ ಟರಮಣಪ್ಪ ಚಾಲನೆ ನೀಡಿದರು. 
ಚಿಕ್ಕಬಳ್ಳಾಪುರ

ಆರ್ಥಿಕ ಅಭಿವೃದ್ಧಿಗೆ ಮಾಸಿಕ ಸಂತೆ ಸಹಕಾರಿ

ಪ್ರಮುಖ ಮುಖ್ಯಾಂಶಗಳು

  • ತಾಲೂಕು, ಗ್ರಾಪಂ ವ್ಯಾಪ್ತಿಯ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ, ಮಾರಾಟ
  • ಸಂಜೀವಿನಿ ಯೋಜನೆಯಡಿ ಆರ್ಥಿಕ ನೆರವು
  • ಸಂಜೀವಿನಿ ಯೋಜನೆಯಡಿ ಆರ್ಥಿಕ ನೆರವು ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳು
ಚಿಂತಾಮಣಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ (ಎನ್​ಆರ್​ಎಲ್​ಎಂ) ಸಂಜೀವಿನಿ ಯೋಜನೆಯಡಿ ಆರ್ಥಿಕ ನೆರವು ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ, ಮಾರಾಟಕ್ಕಾಗಿ ಈ ಸಂತೆ ಆಯೋಜಿಸಲಾಗಿದೆ ಎಂದು ಗ್ರಾಪಂ ಅಧ್ಯಕ್ಷ ವೈ.ವೆಂಕಟರಮಣಪ್ಪ ಹೇಳಿದರು.
ತಾಲೂಕಿನ ಕೋರ್ಲಪರ್ತಿ ಗ್ರಾಪಂ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಸಂತೆಯಲ್ಲಿ ಮಾತನಾಡಿ, ಇಂತಹ ಸಂತೆಗಳಲ್ಲಿ ಹೆಚ್ಚಿನ ಸಂಘಗಳು ಪಾಲ್ಗೊಳ್ಳಬೇಕು. ಗುಣಮಟ್ಟದ, ಪರಿಶುದ್ಧವಾದ ಉತ್ಪನ್ನ ತಯಾರಿಸಬೇಕು. ಉತ್ಪನ್ನಗಳ ಬಗ್ಗೆ ಪ್ರಚಾರ ಮಾಡಬೇಕು ಎಂದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಪಣೀಂದ್ರ ಮಾತನಾಡಿ, ಮಹಿಳೆಯರು ಆರ್ಥಿಕ ಅಭಿವೃದ್ಧಿ ಹೊಂದಲು ಉತ್ತೇಜನ ನೀಡುವುದಕ್ಕಾಗಿ ಜಿಪಂ ಮಾಸಿಕ ಸಂತೆ ಅನುಷ್ಠಾನಗೊಳಿಸಿದೆ ಎಂದರು.
ಗ್ರಾಮೀಣದಲ್ಲಿ ಬೆಳೆಯುವ ವಸ್ತು ಬಳಸಿ ವಿವಿಧ ಬಗೆಯ ಹಪ್ಪಳ, ಉಪ್ಪಿನಕಾಯಿ, ಖಾರದ ಪುಡಿ ಇತರ ಆಹಾರ ಉತ್ಪನ್ನ, ತಾಲೂಕು, ಗ್ರಾಪಂ ವ್ಯಾಪ್ತಿಯ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ, ಮಾರಾಟಕ್ಕೆ ಇಟ್ಟಿದ್ದರು.
ಸಂತೆಗೆ ಆಗಮಿಸಿದ ಸಾರ್ವಜನಿಕರು ವಸ್ತು ಖರೀದಿಸುವ ಜತೆಗೆ ಮಹಿಳಾ ಸ್ವಸಹಾಯ ಸಂಘಗಳಿಗೆ ಅಭಿನಂದಿಸಿದರು.
ತಾಲೂಕು ಅಭಿಯಾನ ನಿರ್ವಹಣಾ ಘಟಕದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಎಂ.ಕೃಷ್ಣಮೂರ್ತಿ, ಕೃಷಿಯೇತರ ವ್ಯವಸ್ಥಾಪಕಿ ಶಿವಮ್ಮ, ವಲಯ ಮೇಲ್ವಿಚಾರಕಿ ನಾಗರತ್ನ, ಬಿಆರ್​ಪಿ ಕಲ್ಯಾಣಿ, ಗ್ರಾಪಂ ಅಧ್ಯಕ್ಷ ವೈ.ವೆಂಕಟರಮಣಪ್ಪ, ಉಪಾಧ್ಯಕ್ಷ ನಾರಾಯಣಪ್ಪ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಪಣೀಂದ್ರ, ಸಂಘದ ಸದಸ್ಯರು ಇದ್ದರು.