ಉಲ್ಟಾ ಹಾರಿರುವ ರಾಷ್ಟ್ರಧ್ವಜ 
ಚಿಕ್ಕಬಳ್ಳಾಪುರ

ರಾಷ್ಟ್ರೀಯ ಹಬ್ಬ ಗಣರಾಜ್ಯೋತ್ಸವ ಆಚರಣೆಯಲ್ಲಿ ಉಲ್ಟಾ ಹಾರಿದ ರಾಷ್ಟ್ರಧ್ವಜ

ಚಿಕ್ಕಬಳ್ಳಾಪುರ: ಮಂಚೇನಹಳ್ಳಿಯಲ್ಲಿ ರಾಷ್ಟ್ರೀಯ ಹಬ್ಬ ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಲಾಗಿದೆ. ಇದೇ ವೇಳೆ ಶಿಕ್ಷಕರ ಎಡವಟ್ಟಿಗೆ ಆಕ್ರೋಶ ವ್ಯಕ್ತವಾಗಿದೆ.
ಮಂಚೇನಹಳ್ಳಿಯಲ್ಲಿ ತಾಲೂಕು ಆಡಳಿತ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಕೈಗೊಳ್ಳಲಾಗಿತ್ತು.‌ ಇದರಲ್ಲಿ ತಹಸೀಲ್ದಾರ್ ಪೂರ್ಣಿಮಾ ಧ್ವಜಾರೋಹಣ ನೆರವೇರಿಸಿದರು. ಇದೇ ವೇಳೆ ಉಲ್ಟಾ ಹಾರಿರುವುದು ಕಂಡು ಬಂದಿದೆ. ಮೇಲಕ್ಕೆ ಹಸಿರು, ಬಿಳಿ ಹಾಗೂ ಕೇಸರಿ ಬಣ್ಣ ಕೆಳಕ್ಕೆ ಕಾಣಿಸಿಕೊಂಡಿದೆ. ತಕ್ಷಣ ಸ್ಥಳೀಯರು ಶಿಷ್ಟಾಚಾರ ಉಲ್ಲಂಘನೆ ಹಾಗೂ ರಾಷ್ಟ್ರಧ್ವಜಕ್ಕೆ ಅಪಮಾನವಾಗುತ್ತಿರುವುದರ ಬಗ್ಗೆ ಗಮನ ಸೆಳೆದಿದ್ದಾರೆ. ಇದರಿಂದ‌ ಎಚ್ಚೆತ್ತುಕೊಂಡ‌ ಶಿಕ್ಷಕರು ಧ್ವಜವನ್ನು ಕೆಳಗೆ ಇಳಿಸಿದ್ದಾರೆ. ಬಳಿಕ ಸರಿಪಡಿಸಿ ಮತ್ತೆ ಧ್ವಜಾರೋಹಣ ನೆರವೇರಿಸಿದ್ದಾರೆ. ಇದರ ಯಡವಟ್ಟಿಗೆ ಸ್ಥಳೀಯರು ಆಕ್ರೋಶ ವ್ಯಕ್ತಪಿಡಿಸಿದರು. ಅಚಾತುರ್ಯದಿಂದ ತಪ್ಪಾಗಿ ಹೋಗಿದೆ ಎಂಬುದಾಗಿ ಸಮರ್ಥಿಸಿಕೊಳ್ಳಲು ಮುಂದಾದ ಶಿಕ್ಷಕರನ್ನು‌ ತರಾಟೆಗೆ ತೆಗೆದುಕೊಂಡಿದ್ದಾರೆ.‌‌ ರಾಷ್ಟ್ರಧ್ವಜದ ವಿಚಾರದಲ್ಲಿ ಪ್ರಜ್ಞೆ ತಪ್ಪಿ ಕೆಲಸ ಮಾಡುವುದು ಸರಿಯೇ? ಬೈ ಮಿಸ್ ತಪ್ಪಾಗಿದೆ ಎಂದರೆ ತಪ್ಪು ಸರಿ ಹೋಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.
ರಾಷ್ಟ್ರಧ್ವಜವನ್ನು ಕಟ್ಟುವ ಸಂದರ್ಭದಲ್ಲಿ ಅಸಡ್ಡೆ, ಧ್ವಜಾರೋಹಣ ಮೊದಲು ಖಾತ್ರಿಪಡಿಸಿಕೊಳ್ಳುವಲ್ಲಿನ ಬೇಜವಾಬ್ದಾರಿಯು ಎಡವಟ್ಟಿಗೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.