ಜಾಮೀನು ಪಡೆದ ರಾಜೀವ್ ಗೌಡ 
ಚಿಕ್ಕಬಳ್ಳಾಪುರ

ಅಧಿಕಾರಿಗೆ ಧಮ್ಕಿ ಹಾಕಿ, ಬಂಧನಕ್ಕೊಳಗಾಗಿದ್ದ ರಾಜೀವ್ ಗೌಡಗೆ ಜಾಮೀನು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ.ಅಮೃತಾಗೆಗೆ ಬ್ಯಾನರ್ ತೆರವುಗೊಳಿಸಿದ ವಿಚಾರವಾಗಿ ಮೊಬೈಲ್ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್‌ಗೌಡಗೆ ಜೆಎಂಎಫ್‌ಸಿ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಕಳೆದ ಮೂರು ದಿನಗಳಿಂದಲೂ ನ್ಯಾಯಾಂಗ ಬಂಧನ ಮತ್ತು ಪೊಲೀಸ್ ಕಸ್ಟಡಿಯಲ್ಲಿದ್ದ ರಾಜೀವ್‌ಗೌಡ ಅವರಿಗೆ ಬಿಡುಗಡೆ ಭಾಗ್ಯ ದೊರೆತಿದ್ದು ಇದೇ ಪಟಾಕಿ ಸಿಡಿಕಿ ಸಂಭ್ರಮಾಚರಣೆ ಮಾಡದಿರವುದು ಸೇರಿದಂತೆ ನಾನಾ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.
ಜ.೧೪ ರಂದು ರಾಜೀವ್‌ಗೌಡ ವಿರುದ್ಧ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಪೌರಾಯುಕ್ತೆಗೆ ಬೆದರಿಕೆಯನ್ನೊಡ್ಡಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಇದರ ನಡುವೆ ನಾಪತ್ತೆಯಾಗಿದ್ದ ಆರೋಪಿ ಕೇರಳದಲ್ಲಿ ಪತ್ತೆಯಾಗಿದ್ದು ಚಿಂತಾಮಣಿ ಜೈಲಿನಲ್ಲಿಡಲಾಗಿತ್ತು. ಈಗ ನ್ಯಾಯಾಲಯವು ಜಾಮೀನು ನೀಡಿದೆ. ವಕೀಲ ವಿವೇಕ್ ಸುಬ್ಬಾರೆಡ್ಡಿ ಅವರು ರಾಜೀವ್‌ಗೌಡ ಪರ ವಕಾಲತ್ತು ವಹಿಸಿದ್ದರು.