ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರದಲ್ಲಿ ಸಂಭವಿಸಿದ ಅಪಘಾತದ ಸ್ಥಳ 
ಚಿಕ್ಕಬಳ್ಳಾಪುರ

ಯಮನಂತೆ ಬಂದ ಟಿಪ್ಪರ್ ಲಾರಿಗೆ ಬಲಿಯಾದ ನಾಲ್ವರು

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಭವನದ ಕೂಗಳತೆ ದೂರದಲ್ಲಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಯುವಕರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ತಾಲೂಕಿನ ಅಜ್ಜವಾರ ಗ್ರಾಮದ ಬಳಿ ಟಿಪ್ಪರ್ ಲಾರಿಯು ದ್ವಿ ಚಕ್ರ ವಾಹನಕ್ಕೆ ಹೊಡೆದಿದೆ. ಇದರಿಂದ ಗ್ರಾಮದ ನಂದೀಶ್, ನರಸಿಂಹ, ಅರುಣ್, ಮನೋಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
*ಘಟನೆಯ ಹಿನ್ನೆಲೆ*
ಚಿಕ್ಕಬಳ್ಳಾಪುರದಿಂದ ಕೂಲಿ ಕೆಲಸ ಮುಗಿಸಿಕೊಂಡು ನಾಲ್ವರು ದ್ವಿಚಕ್ರ ವಾಹನದಲ್ಲಿ ಊರಿಗೆ ತೆರಳುತ್ತಿದ್ದರು. ಇದೇ ವೇಳೆ ಶಿಡ್ಲಘಟ್ಟ ಕಡೆಯಿಂದ ಚಿಕ್ಕಬಳ್ಳಾಪುರ ಮಾರ್ಗವಾಗಿ ಅತಿ ವೇಗವಾಗಿ ಬರುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.