ಜಿಲ್ಲೆ

ದಂಡಕ್ಕೆ ಹೆದರಿ ಹೆಲ್ಮೆಟ್ ಧರಿಸದಿರಿ

ಚಿಕ್ಕಜಾಜೂರು: ದಂಡ, ಪೊಲೀಸ್ ಭೀತಿಗಾಗಿ ಹೆಲ್ಮೆಟ್ ಹಾಕಬೇಡಿ, ಜೀವ ರಕ್ಷಣೆಗಾಗಿ ಧರಿಸಿ ಎಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮೋಹನ್ ತಿಳಿಸಿದರು.

ಗ್ರಾಮದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ಹೆಲ್ಮೆಟ್ ಜಾಗೃತಿ ಬೈಕ್ ರ‌್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.

ರಸ್ತೆ ಅಪಘಾತಗಳಲ್ಲಿ ಮೃತರಾದವರಲ್ಲಿ ಹೆಲ್ಮೆಟ್ ಧರಿಸದ ಬೈಕ್ ಸವಾರರೇ ಅಧಿಕ. ಈ ಹಿನ್ನೆಲೆಯಲ್ಲಿ ಸರ್ಕಾರ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯ ಮಾಡಿದೆ. ಈ ನಿಯಮ ಪಾಲಿಸಿ ಜೀವ ರಕ್ಷಣೆ ಮಾಡಿಕೊಳ್ಳಿ ಎಂದು ಮನವಿ ಮಾಡಿದರು.

ರ‌್ಯಾಲಿಯಲ್ಲಿ ಎಎಸ್‌ಐ ಶಿವಮೂರ್ತಿ, ಕೃಷ್ಣನಾಯಕ್, ದೇವರಾಜ್, ವಸಂತ್, ವೀರಭದ್ರಪ್ಪ ಪಾಲ್ಗೊಂಡಿದ್ದರು.