ಚಿಕ್ಕಮಗಳೂರು: ದಲಿತ ದೌರ್ಜನ್ಯ ತಡೆ ಕಾಯ್ದೆ ಕುರಿತು ಸುಪ್ರೀಂಕೋರ್ಟ್ ನೀಡಿರುವ ಆದೇಶ ಮರುಪರಿಶೀಲಿಸಲು ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸಬೇಕು ಎಂದು ಆಗ್ರಹಿಸಿ ತಾಲೂಕಿನ ಶಿರವಾಸೆಯಲ್ಲಿ ವಿವಿಧ ಪಕ್ಷ, ಸಂಘಟನೆಗಳ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.
ದಲಿತ ಸಂಘರ್ಷ ಸಮಿತಿ ಮುಖಂಡ ದಂಟರಮಕ್ಕಿ ಶ್ರೀನಿವಾಸ್ ಮಾತನಾಡಿ, 1989ರಲ್ಲಿ ಅಂದಿನ ಸರ್ಕಾರ ದಲಿತ ದೌರ್ಜನ್ಯ ತಡೆ ಕಾಯ್ದೆ ಜಾರಿ ಮಾಡಿದ್ದರಿಂದ ದಲಿತರ ಮೇಲೆ ನಡೆಯುತ್ತಿದ್ದ ಹಲ್ಲೆ, ದೌರ್ಜನ್ಯಗಳು ಕಡಿಮೆಯಾಗಿದ್ದವು. ಆದರೆ, ಇತ್ತೀಚೆಗೆ ನ್ಯಾಯಾಲಯ ನೀಡಿರುವ ತೀರ್ಪು ದಲಿತರ ಮೇಲೆ ದೌರ್ಜನ್ಯಕ್ಕೆ ಇಂಬು ನೀಡುವಂತಿದೆ ಎಂದು ದೂರಿದರು.
ನಾಲ್ಕು ಗೋಡೆ ಮಧ್ಯೆ ನಡೆದ ಹಲ್ಲೆಯನ್ನು ಅವಮಾನ ಪ್ರಕರಣ ಎಂದು ಪರಿಗಣಿಸಲಾಗದು ಎಂಬ ತೀರ್ಪಿನಿಂದ ಮುಂದೆ ನಾಲ್ಕು ಗೋಡೆ ಮಧ್ಯ ದಲಿತರ ಮೇಲೆ ದೌರ್ಜನ್ಯ, ಅತ್ಯಾಚಾರ ಪ್ರಕರಣ ನಡೆದರೆ ಯಾರು ಹೊಣೆ ಎಂದು ಪ್ರಶ್ನಿಸಿದರು. ಈ ಆದೇಶವನ್ನು ಮರುಪರಿಶೀಲಿಸುವಂತೆ ಕೇಂದ್ರ ಸರ್ಕಾರ ಕೂಡಲೇ ನ್ಯಾಯಾಲಯಕ್ಕೆ ಮರುಪರಿಶೀಲನಾ ಅರ್ಜಿ ಸಲ್ಲಿಸುವಂತೆ ಆಗ್ರಹಿಸಿದರು.
ಕಾಂಗ್ರೆಸ್ ಮುಖಂಡ ಎಸ್.ಪೇಟೆ ಸತೀಶ್, ಡಿಎಸ್ಎಸ್ನ ವಿರೂಪಾಕ್ಷ, ಸತೀಶ್, ಸಿಪಿಐನ ದಾನು, ಬಿಎಸ್ಪಿ ಹರೀಶ್ವಿುತ್ರ, ವೆಂಕಟೇಶ್, ಯೋಗೇಶ್, ಸುರೇಶ್, ಭರತ್, ಸ್ನೇಹ, ರಮೇಶ್ ಇದ್ದರು.