ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ,ಜಾರ್ಜ್ ಅವರು ಬರ ಪರೀಶಲನೆಗೆ ತೆರಳಿದ ಸಂದರ್ಭದಲ್ಲಿ ಕಿಲೋಮೀಟರ್‌ಗಟ್ಟಲೆ ನೂರಾರು ಕಾರುಗಳು ಓಡಾಟ ನಡೆಸಿದ್ದರಿಂದಾಗಿ ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಗಿತ್ತು. 
ಚಿಕ್ಕಮಗಳೂರು

ಬರ ಪರಿಸ್ಥಿತಿ ಅಧ್ಯಯನ ವೇಳೆ ಕಾರುಗಳ ದರ್ಬಾರ್‌

ಚಿಕ್ಕಮಗಳೂರು: ಬರ ಪರಿಸ್ಥಿತಿ ಅಧ್ಯಯನಕ್ಕೆ ಆಗಮಿಸಿದ ಸಚಿವ ಕೆ.ಜೆ.ಜಾರ್ಜ್‌ ಹಾಗೂ ಶಾಸಕರಾದ ಕೆ.ಎಸ್‌.ಆನಂದ್‌, ಶ್ರೀನಿವಾಸ್‌ ಹಾಗೂ ಅಧಿಕಾರಿಗಳು ಭೇಟಿ ನೀಡಿದ ವೇಳೆ ಬರೋಬ್ಬರಿ 150ಕ್ಕೂ ಅಧಿಕ ಕಾರುಗಳು ಸಾಲುಗಟ್ಟೆ ರಸ್ತೆಯಲ್ಲಿ ಸಂಚರಿಸಿದವು.
ಈ ವೇಳೆ ಇಡೀ ರಸ್ತೆ ಬ್ಲಾಕ್‌ ಆಗಿತ್ತು. ಇದರಿಂದ ಕಡೂರು ತಾಲೂಕಿನ ಒಂದು ಕಡೆ ಶಾಲಾ ವಾಹನ ರಸ್ತೆಯಲ್ಲಿ ಸುಮಾರು 20 ರಿಂದ 30 ನಿಮಿಷ ನಿಂತುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿತ್ತು.
9ನೇ ಮೈಲಿಯಲ್ಲಿ ಅಡ್ಡಗಟ್ಟಿದ ರೈತರು
ಬರ ಪರಿಸ್ಥಿತಿ ಅಧ್ಯಯನಕ್ಕೆ ಕಡೂರು ತಾಲೂಕಿನ ವಿವಿಧ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ಕಡೂರಿಗೆ ತೆರಳುವ ಮಾರ್ಗದ 9 ಮೈಲಿ ಸರ್ಕಲ್‌ನಲ್ಲಿ ಸಚಿವ ಕೆ.ಜೆ.ಜಾರ್ಜ್‌ ಸೇರಿದಂತೆ ಶಾಸಕರು, ಅಧಿಕಾರಿಗಳ ಕಾರು ಅಡ್ಡಗಟ್ಟಿ ಭದ್ರಾ ಮೇಲ್ಡಂಡೆ ಯೋಜನೆಯ ಜಮೀನು ಕಳೆದುಕೊಂಡ ರೈತರಿಗೆ ತ್ವರಿತವಾಗಿ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ ಘಟನೆ ನಡೆಯಿತು.