ಲಿಂಗದಹಳ್ಳಿಯಲ್ಲಿ ಆಯೋಜಿಸಿದ್ದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿ ಡಿ.ಎಸ್.ಸುರೇಶ್, ಬೆಳ್ಳಿ ಪ್ರಕಾಶ್, ಎಂ.ಆರ್.ದೇವರಾಜ್ ಶೆಟ್ಟಿ, ಬಿ.ಎಸ್.ಕಲ್ಮರುಡಪ್ಪ, ಕೆ.ಆರ್.ಆನಂದಪ್ಪ ಇದ್ದರು.  
ಚಿಕ್ಕಮಗಳೂರು

ಕಾರ್ಯಕರ್ತರೇ, ತಳಮಟ್ಟದಿಂದ ಪಕ್ಷ ಸಂಘಟನೆ ಶ್ರಮಿಸಿ

ತರೀಕೆರೆ: ತಳಮಟ್ಟದಿಂದ ಪಕ್ಷ ಸಂಘಟನೆಗೊಂಡರೆ ಬಿಜೆಪಿ ಅಧಿಕಾರ ಹಿಡಿಯುವುದು ಸುಲಭ ಎಂದು ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದರು.
ಲಿಂಗದಹಳ್ಳಿ ಗ್ರಾಮದಲ್ಲಿ ಬಿಜೆಪಿ ಮಂಡಲದಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪಂಡಿತ್‌ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಬಿಜೆಪಿ ಕೆಳ ಹಂತದಲ್ಲಿ ಶ್ರಮಿಸುವ ಸಾಮಾನ್ಯ ಕಾರ್ಯಕರ್ತನಿಗೂ ಅಧಿಕಾರ ನೀಡುವುದರಿಂದ ಪಕ್ಷ ನಿಷ್ಠೆಯಿಂದ ಸಂಘಟನೆ ಬಲಪಡಿಸಬೇಕು. ರಾಷ್ಟ್ರ ರಕ್ಷಣೆ ಜತೆ ಅಭಿವೃದ್ಧಿಯ ಧ್ಯೇಯೋದ್ದೇಶದೊಂದಿಗೆ ರಾಷ್ಟ್ರ ಭಕ್ತಿಯ ಪ್ರತಿಯೊಬ್ಬ ಕಾರ್ಯಕರ್ತರೂ ಮೈಗೂಡಿಸಿಕೊಳ್ಳಬೇಕು ಎಂದರು.
ಮಾಜಿ ಶಾಸಕ ಬೆಳ್ಳಿಪ್ರಕಾಶ್ ಮಾತನಾಡಿ, ಬಿಜೆಪಿ ಜಾಗತಿಕ ಮಟ್ಟದಲ್ಲಿ ಬಹುದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ರಾಷ್ಟ್ರಪ್ರೇಮ, ಸಾಮಾಜಿಕ ಕಳಕಳಿ, ಕಟ್ಟಕಡೆಯ ವ್ಯಕ್ತಿಯ ಅಭಿವೃದ್ಧಿ ಪರ ಚಿಂತನೆ ಹೊಂದಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಆಡಳಿತ ಬದಲಾವಣೆ ಸಹಜವಾಗಿದ್ದು, ಕಾರ್ಯಕರ್ತರು ಮುಂಬರುವ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು. ಈ ಮೂಲಕ ಜನಪರ ಸರ್ಕಾರ ರಚನೆಗೆ ಅಡಿಗಲ್ಲು ಇಡಬೇಕು ಎಂದು ಹೇಳಿದರು.
ಎಂಎಲ್ಸಿಗಳಾದ ಅರುಣ್ ಶಹಾಪುರ್, ಆರ್.ಕೆ. ಸಿದ್ರಾಮಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ, ಬಿಜೆಪಿ ರಾಜ್ಯ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಕಲ್ಮರುಡಪ್ಪ, ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಕೆ.ಆರ್.ಆನಂದಪ್ಪ, ಟಿ.ಎಲ್.ರಮೇಶ್, ಜಿಪಂ ಮಾಜಿ ಅಧ್ಯಕ್ಷರಾದ ಕೆ.ಆರ್.ಧ್ರುವಕುಮಾರ್, ಬಿ.ಎಸ್.ಚೈತ್ರಶ್ರೀ, ಪ್ರಮುಖರಾದ ಪ್ರೇಮ್‌ಕುಮಾರ್, ಈಶ್ವರಹಳ್ಳಿ ಮಹೇಶ್, ಡಾ.ನರೇಂದ್ರ, ಬಿಜೆಪಿ ಮಂಡಲ ಅಧ್ಯಕ್ಷ ಗರಗದಹಳ್ಳಿ ಪ್ರತಾಪ್, ಬೇಲೇನಹಳ್ಳಿ ಸೋಮಶೇಖರ್ ಮತ್ತಿತರರಿದ್ದರು.