ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಗರದ ಬಸವನಹಳ್ಳಿಯ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ಪ್ರಮುಖ ರಸ್ತೆಗಳಲ್ಲಿ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಜಾಥಾ ನಡೆಸಲಾಯಿತು. 
ಚಿಕ್ಕಮಗಳೂರು

ವಿದ್ಯಾರ್ಥಿಗಳಿಂದ ಎಸ್‌ಐಆರ್ ಬಗ್ಗೆ ಜಾಗೃತಿ

ನಿತ್ಯಾನಂದ ಎಸ್.ಎನ್.
ಚಿಕ್ಕಮಗಳೂರು: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಗರದ ಬಸವನಹಳ್ಳಿಯ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ಪ್ರಮುಖ ರಸ್ತೆಗಳಲ್ಲಿ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಜಾಥಾ ನಡೆಸಲಾಯಿತು.
ಈ ಸಂದರ್ಭದಲ್ಲಿ ಅರ್ಹ ಮತದಾರರು ಎಸ್‌ಐಆರ್ ಪ್ರಕ್ರಿಯಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಜಾಗೃತಿ ಸಂದೇಶ ನೀಡಲಾಯಿತು. ಇದೇ ವೇಳೆ ಗಣತಿ ನಮೂನೆ ಭರ್ತಿ ಮಾಡುವ ವಿಧಾನದ ಬಗ್ಗೆ ಸಹ ವಿದ್ಯಾರ್ಥಿಗಳು ಮತದಾರರಿಗೆ ಮಾಹಿತಿ ನೀಡಿದರು.
ಆರಂಭದಲ್ಲಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಎಸ್‌ಐಆರ್ ಅಕ್ಷರಗಳ ರೂಪದಲ್ಲಿ ನಿಲ್ಲಿಸಿ ರಾಷ್ಟçಗೀತೆ ಹಾಡಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಸತೀಶ್‌ಶಾಸ್ತಿç, ಇಎಲ್‌ಸಿ ಸಂಚಾಲಕರಾದ ಸುರೇಶ್ ಹೆಚ್.ಒ., ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.