ಆಲ್ದೂರು ಸಮೀಪದ ತೋರಣಮಾವು ಗ್ರಾಮದಲ್ಲಿ ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು.  
ಚಿಕ್ಕಮಗಳೂರು

ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯ

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ಹೆದ್ದಾರಿ 27ರ ತೋರಣಮಾವು ಗ್ರಾಮ
  • ಬೈಕ್ ಬಸ್ ಅಡಿಯಲ್ಲಿ ಸಿಲುಕಿತ್ತು
  • ಚಾಲಕನ ನಿರ್ಲಕ್ಷ್ಯ
ಆಲ್ದೂರು: ತೋರಣಮಾವು ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಪವಾಡ ಸದೃಶ್ಯ ರೀತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ರಾಜ್ಯ ಹೆದ್ದಾರಿ 27ರ ತೋರಣಮಾವು ಗ್ರಾಮದ ಬಳಿ ಮಂಗಳವಾರ ಮಧ್ಯಾಹ್ನ  ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಬಸ್ ಅಡಿಯಲ್ಲಿ ಸಿಲುಕಿತ್ತು. ಬೈಕ್ ಸವಾರನಿಗೆ  ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳೀಯರು ಬೈಕ್ ಸವಾರರನ್ನು ಆಂಬುಲೆನ್ಸ್‌ನಲ್ಲಿ  ಚಿಕಿತ್ಸೆಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಕರೆದೊಯ್ದರು. 
ಅಪಘಾತದಿಂದಾಗಿ ಕೆಲ ಕಾಲ ಸಂಚಾರ ಸಿಕ್ಕು ಉಂಟಾಗಿತ್ತು. ಬಸ್ ಚಾಲಕನ ನಿರ್ಲಕ್ಷ್ಯ ಅಪಘಾತಕ್ಕೆ ಕಾರಣ ಎಂದು ಸ್ಥಳದಲ್ಲಿದ್ದವರು   ಚಾಲಕನನ್ನು ತರಾಟೆಗೆ ತೆಗೆದುಕೊಂಡರು. ಆಲ್ದೂರು ಪೊಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.