ಡೂರು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ಜಾಗೃತಿ ಅರಿವು ಜಾಥಾ ಕಾರ್ಯಕ್ರಮಕ್ಕೆ ನ್ಯಾಯಾಧೀಶ ರ್ಇಾನ್ ಚಾಲನೆ ನೀಡಿದರು. ತಹಖಲೀಲ್, ಡಾ. ಚಂದಾ, ಗುರುಮೂರ್ತಿ, ಡಾ. ಶ್ರೀನಿವಾಸ್ ಮತ್ತಿತರರಿದ್ದರು. 
ಚಿಕ್ಕಮಗಳೂರು

ಆರೋಗ್ಯಕರ ಸಮಾಜ ನಿರ್ಮಿಸಿ

ಕಡೂರು: ಯುವಸಮೂಹ ಲೈಂಗಿಕ ಆರೋಗ್ಯದ ಬಗ್ಗೆ ಜಾಗೃತಿ ಹೊಂದಬೇಕು. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಒತ್ತು ನೀಡಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರ್ಇಾನ್ ತಿಳಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸೋಮವಾರ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಜಾಥಾ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಏಡ್ಸ್ ತಡೆಗಟ್ಟುವಿಕೆಯಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ. ಎಚ್‌ಐವಿ ಸೋಂಕಿತರ ಬಗ್ಗೆ ಕಳಂಕ ಮತ್ತು ತಾರತಮ್ಯ ನಿವಾರಿಸಬೇಕು. ಸರ್ಕಾರ ಆರೋಗ್ಯ ಇಲಾಖೆ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ಮೂಡಿಸುತ್ತಿದೆ. ಇವುಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಆರೋಗ್ಯಕರ ಜೀವನ ಶೈಲಿಯಿಂದ ಬದುಕನ್ನು ಉತ್ತಮಪಡಿಸಿಕೊಳ್ಳಬಹುದು ಎಂದರು.
ಸಾರ್ವಜನಿಕ ಆಸ್ಪತ್ರೆಯ ಡಾ. ಗುರುಮೂರ್ತಿ ಉಪನ್ಯಾಸ ನೀಡಿದರು. ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ತಹಖಲೀಲ್, ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಚಂದಾ, ತಾಲೂಕು ವೈದ್ಯಾಧಿಕಾರಿ ಡಾ. ಶ್ರೀನಿವಾಸ್ ಸೇರಿದಂತೆ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಆರೋಗ್ಯ ಇಲಾಖೆ ಸಿಬ್ಬಂದಿ ಜಾಥಾ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.