ಮೂಡಿಗೆರೆ ತಾಪಂ ಕಚೇರಿಯಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಬಿ.ಶಂಕರ್ ಅವರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದರು. ಹೊಸಕೆರೆ ರಮೇಶ್, ಸುಧೀರ್, ಕುನ್ನಳ್ಳಿ ರವಿ, ಸಂಪತ್, ಹರೀಶ್ ಸಬ್ಬೇನಹಳ್ಳಿ, ಶ್ರೀನಿವಾಸ್, ಮಹಮ್ಮದ್ ಯಾಕೂಬ್ ಇತರರಿದ್ದರು.
ಮೂಡಿಗೆರೆ: ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ನೂತನ ಅಧ್ಯಕ್ಷರಾಗಿ ಸಿ.ಬಿ.ಶಂಕರ್ ಸೋಮವಾರ ತಾಪಂ ಸಭಾಂಗಣದಲ್ಲಿ ಅಧಿಕಾರ ವಹಿಸಿಕೊಂಡರು.
ಗೋಣಿಬೀಡು ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಎ.ಜಿ.ಸುಬ್ರಾಯಗೌಡ ಮಾತನಾಡಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಡವರು, ಮಧ್ಯಮ ವರ್ಗ, ಮಹಿಳೆಯರು, ಯುವಕರು ಹಾಗೂ ದುಡಿಯುವ ವರ್ಗದ ಜನರಿಗೆ ಸಾಕಷ್ಟು ಅನುಕೂಲವಾಗಿದೆ. ಅನುಷ್ಠಾನ ಸಮಿತಿ ಹಿಂದಿನ ಅಧ್ಯಕ್ಷ ಬಿ.ಎಸ್.ಜಯರಾಂ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದರು ಎಂದು ತಿಳಿಸಿದರು.
ನೂತನ ಅಧ್ಯಕ್ಷ ಸಿ.ಬಿ.ಶಂಕರ್ ಮಾತನಾಡಿ, ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಪರಿಣಾಮಕಾರಿಯಾಗಿ ಚಾಲನೆಗೊಳಿಸಲಾಗುವುದು. ಫಲಾನುಭವಿಗಳ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು. ಅರ್ಹರಿಗೆ ಯೋಜನೆಗಳ ಸೌಲಭ್ಯ ದೊರೆಯುವಂತೆ ಮಾಡಲಾಗುವುದು ಎಂದು ತಿಳಿಸಿದರು.
ಪಪಂ ಮಾಜಿ ಉಪಾಧ್ಯಕ್ಷ ಹೊಸಕೆರೆ ರಮೇಶ್, ವಿಧಾನಸಭಾ ಕ್ಷೇತ್ರದ ಕೆಡಿಪಿ ಸದಸ್ಯ ಸುಧೀರ್, ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಸದಸ್ಯರಾದ ಕುನ್ನಳ್ಳಿ ರವಿ, ಸಂಪತ್, ಅಕ್ರಮ ಸಕ್ರಮ ಸಮಿತಿ ಸದಸ್ಯ ಹರೀಶ್ ಸಬ್ಬೇನಹಳ್ಳಿ, ಶ್ರೀನಿವಾಸ್, ಮೇಲ್ವಿನ್ ಲಸ್ರಾದೋ, ಅರುಣ ಗುತ್ತಿ, ನಾರಾಯಣ, ಮುಖಂಡರಾದ ಮಂಚೇಗೌಡ, ಸುರೇಶ್ ಜೈನ್, ಮನೋಹರ್, ಜಾನಕಿ, ಹೂವಮ್ಮ, ಮಹಮ್ಮದ್ ಯಾಕೂಬ್ ಇತರರಿದ್ದರು.