ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ  
ಚಿಕ್ಕಮಗಳೂರು

ಜನಾಭಿಪ್ರಾಯ ಆಲಿಸಲು ಸಿಎಂ ಆಗಮನ

ನಿತ್ಯಾನಂದ ಎಸ್.ಎನ್.
ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ಕುರಿತು ಜನಸಾಮಾನ್ಯರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಹಾಗೂ ಆಕ್ಷೇಪಣೆಗಳನ್ನು ಆಲಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಗೆ ಆಗಮಿಸುತ್ತಿರುವುದು ಕಾಂಗ್ರೆಸ್ ಸರ್ಕಾರದ ಜನಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಘಟ್ಟಗಳಿಗೆ ಸಂಬAಧಿಸಿದ ಕಸ್ತೂರಿ ರಂಗನ್ ಸಮಿತಿಯ ಶಿಫಾರಸುಗಳ ಕುರಿತು ಸ್ಥಳೀಯ ಜನರ ಅಭಿಪ್ರಾಯಗಳನ್ನು ತಿಳಿದುಕೊಳ್ಳುವ ಉz್ದೆÃಶದಿಂದ ಮುಖ್ಯಮಂತ್ರಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.
ಪಶ್ಚಿಮ ಘಟ್ಟ ಪ್ರದೇಶ ಪರಿಸರ ಹಾಗೂ ಜೀವ ವೈವಿಧ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ. ಇದೇ ಪ್ರದೇಶದಲ್ಲಿ ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಅವಲಂಬಿಸಿಕೊAಡು ಸಾವಿರಾರು ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ೧೩೮ ಗ್ರಾಮಗಳ ೨,೨೩,೪೪೦.೪೧ ಹೆಕ್ಟೇರ್ ಪ್ರದೇಶ ಕಸ್ತೂರಿ ರಂಗನ್ ವರದಿ ವ್ಯಾಪ್ತಿಗೆ ಒಳಪಡುವ ಸಾಧ್ಯತೆಯಿಂದ ಜನರಲ್ಲಿ ಆತಂಕ ಮೂಡಿದೆ ಎಂದು ಹೇಳಿದರು.
ಇದು ಕೇವಲ ಪರಿಸರದ ವಿಚಾರವಲ್ಲ. ಈ ಭಾಗದ ಜನರ ಬದುಕು ಮತ್ತು ಜೀವನೋಪಾಯಕ್ಕೆ ಸಂಬAಧಿಸಿದ ಪ್ರಶ್ನೆಯಾಗಿದೆ. ಆದ್ದರಿಂದ ಕರ್ನಾಟಕದಿಂದ ಆಯ್ಕೆಯಾಗಿರುವ ಸಂಸದರು ಈ ವಿಚಾರವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿ, ಜಿಲ್ಲೆಯ ಜನರ ಆತಂಕವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕು ಎಂದು ಒತ್ತಾಯಿಸಿದರು.
ಕಸ್ತೂರಿ ರಂಗನ್ ಸಮಿತಿಯು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷö್ಮ ಪ್ರದೇಶಗಳನ್ನು ಗುರುತಿಸುವುದು ಸೇರಿದಂತೆ ಹಲವು ಶಿಫಾರಸುಗಳನ್ನು ಮಾಡಿದ್ದು, ಅದರ ಆಧಾರದ ಮೇಲೆ ಕೇಂದ್ರ ಸರ್ಕಾರ ಪರಿಸರ ಸೂಕ್ಷö್ಮ ಪ್ರದೇಶಕ್ಕೆ ಸಂಬAಧಿಸಿದ ಕರಡು ಅಧಿಸೂಚನೆಗಳನ್ನು ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಜನರ ಅಭಿಪ್ರಾಯ, ಸಲಹೆ ಹಾಗೂ ಆಕ್ಷೇಪಣೆಗಳನ್ನು ಆಲಿಸುವುದು ಅತ್ಯಂತ ಅಗತ್ಯವಾಗಿದೆ ಎಂದರು.
ಮುಖ್ಯಮAತ್ರಿಗಳ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಜನಪರ ಕಾಳಜಿ ಹೊಂದಿರುವ ಎಲ್ಲರೂ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ತಿಳಿಸಬೇಕು. ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಲ್ಲರನ್ನೂ ಸ್ವಾಗತಿಸುವುದಾಗಿ ಹೇಳಿದರು.
ಇದೇ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಳ್ಳಲು ಸಹಕಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು, ಐದು ಕ್ಷೇತ್ರಗಳ ಶಾಸಕರು, ಎಐಸಿಸಿ ಮತ್ತು ಕೆಪಿಸಿಸಿ ಪದಾಧಿಕಾರಿಗಳು, ಪಕ್ಷದ ಮುಖಂಡರು, ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಮುಂಚೂಣಿ ಘಟಕಗಳ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಹಿರೇಗೌಜ ಶಿವು, ರೂಬಿನ್ ಮೋಸೆಸ್, ಬೆಟಗೆರೆ ಪ್ರವೀಣ್, ಪ್ರಕಾಶ್ ಹಾಗೂ ನೂರ್ ಅಹಮದ್ ಉಪಸ್ಥಿತರಿದ್ದರು.