ಕಳಸ ತಾಲೂಕು ಗಿರಿಜನ ಗೌಡಲು ಕ್ಷೇಮಾಭಿವೃದ್ಧಿ ಸಂಘದಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಪಡೆದ ಗೌಡಲು ಸಮುದಾಯದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.
ಕಳಸ: ಯಾವುದೇ ಒಂದು ಸಮುದಾಯ ಮುಖ್ಯವಾಹಿನಿಗೆ ಬರಬೇಕಾದರೆ ಶಿಕ್ಷಣ ಅತ್ಯಂತ ಶಕ್ತಿಶಾಲಿ ಅಸ ಎಂದು ಮೈಸೂರಿನ ರಾಜ್ಯ ಬುಡಕಟ್ಟು ಸಂಶೋಧನ ಕೇಂದ್ರದ ಸಂಶೋಧನಾ ಅಧಿಕಾರಿ ಡಾ.ಕೃಷ್ಣಮೂರ್ತಿ ಹೇಳಿದರು.
ಕಳಸ ತಾಲೂಕು ಗಿರಿಜನ ಗೌಡಲು ಕ್ಷೇಮಾಭಿವೃದ್ಧಿ ಸಂಘದಿಂದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸಿದ ಗೌಡಲು ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದು ಗೌಡಲು ಸಮುದಾಯದ ಮಕ್ಕಳು ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ. ಗಿರಿಜನ ಸಮುದಾಯದ ಮಕ್ಕಳು ಕೇವಲ ಅಂಕಗಳಿಕೆಗೆ ಸೀಮಿತವಾಗದೆ, ಉನ್ನತ ಶಿಕ್ಷಣ ಪಡೆದು ದೇಶದ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಆಗ ಮಾತ್ರ ಸಮುದಾಯದ ನೈಜ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
ಹೆಚ್ಚು ಅಂಕಗಳಿಸಿದ ಎಸ್‌ಎಸ್‌ಎಲ್‌ಸಿಯ ಆರು ಹಾಗೂ ದ್ವಿತೀಯ ಪಿಯುಸಿಯ ಒಂಭತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಿರುತೆರೆ ಕಲಾವಿದರಾದ ಗಜೇಂದ್ರ ಮರಸಣಿಗೆ, ಯಕ್ಷಗಾನ ಕಲಾವಿದರಾದ ಗಿರಿಜಾ ಗೋಪಾಲ್ ಬೇಡಕ್ಕಿ ಅಭಿನಂದಿಸಲಾಯಿತು.
ಸಂಘದ ಅಧ್ಯಕ್ಷ ಅನಿಲ್ ಕುಮಾರ್ ಮುಜೆಕಾನು, ಕಾರ್ಯದರ್ಶಿ ಗಣೇಶ್ ಕುಕ್ಕೋಡು, ಖಜಾಂಚಿ ಬಾಲಕೃಷ್ಣ , ಶಿಕ್ಷಕರಾದ ಶಿವಪ್ಪ, ರಾಜೇಶ್ ಮಲಗಾರು, ಸುಧಾಕರ ಹುಲ್ಲಿನಕುಡಿಗೆ, ಮೇಘಾನಂದ ಬೇಡಕ್ಕಿ, ದಿನೇಶ್ ಎಸ್.ಕೆ ಮೇಗಲ್, ಸುರೇಶ್ ಕೆರ್ನಾಳಿ, ನಾಗೇಂದ್ರ, ಶಿಕ್ಷಕಿ ರೇವತಿ, ಸುರೇಶ್ ಬಿಳಿಗಲ್, ಸತೀಶ್‌ಒಡ್ಡಿಕಟ್ಟೆ ಇದ್ದರು.