ಚಿಕ್ಕಮಳೂರಿನ ದಶಮಾನೋತ್ಸವ ಕ್ರೀಡಾಂಗಣದ ನವೀಕೃತ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಶಂಕುಸ್ಥಾಪನೆ ನೆರವೇರಿಸಿದರು. ಎಚ್.ಡಿ.ತಮ್ಮಯ್ಯ, ಟಿ.ಡಿ.ರಾಜೇಗೌಡ, ಎನ್.ಎಂ.ನಾಗರಾಜ್, ಎಚ್.ಎಸ್.ಕೀರ್ತನಾ, ಎಚ್.ಪಿ.ಮಂಜೇಗೌಡ, ರಾಜೇಂದ್ರ ಕುಮಾರ್ ಕಠಾರಿಯಾ, ಎಂ.ಸಿ.ಶಿವಾನAದ ಸ್ವಾಮಿ ಮತ್ತಿತರರಿದ್ದರು. 
ಚಿಕ್ಕಮಗಳೂರು

ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಶೀಘ್ರ

ಪ್ರಮುಖ ಮುಖ್ಯಾಂಶಗಳು

  • ದಶಮಾನೋತ್ಸವ ಕ್ರೀಡಾಂಗಣದ ಆವರಣದಲ್ಲಿ ನವೀಕೃತ ಕಾಮಗಾರಿಗೆ ಶಂಕುಸ್ಥಾಪನೆ
  • ೭.೯೦ ಕೋಟಿ ರೂ. ಅನುದಾನದಲ್ಲಿ ಕ್ರೀಡಾಂಗಣದ ಅಭಿವೃದ್ಧಿ
ಚಿಕ್ಕಮಗಳೂರು: ದಶಮಾನೋತ್ಸವ ಕ್ರೀಡಾಂಗಣದ ನವೀಕೃತ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಸಮರ್ಪಣೆ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ನಗರದ ದಶಮಾನೋತ್ಸವ ಕ್ರೀಡಾಂಗಣದ ಆವರಣದಲ್ಲಿ ನವೀಕೃತ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಾವು ಕಾಮಗಾರಿ ಆನೊಬ್ಬ ಮಾಡಿ ಬಳಿಕ ಹಾಗೆಯೇ ಬಿಡುವುದಿಲ್ಲ. ಬದಲಿಗೆ ಸೂಕ್ತ ಅನುದಾನವನ್ನು ಮೀಸಲಿರಿಸಿಕೊಂಡು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದರು.
ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಕಳೆದ ಸರ್ಕಾರದ ಅವಧಿಯಲ್ಲಿ ಖೇಲೋ ಇಂಡಿಯಾ ಯೋಜನೆ ಅಡಿ ದಶಮಾನೋತ್ಸವ ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿತ್ತು. ಆದರೆ ಕಾರಣಾಂತರಗಳಿAದಾಗಿ ಕಾಮಗಾರಿ ಅರ್ಧಕ್ಕೆ ನಿಂತಿತ್ತು. ಈಗ ೭.೯೦ ಕೋಟಿ ರೂ. ಅನುದಾನದಲ್ಲಿ ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಖೇಲೋ ಇಂಡಿಯಾ ಯೋಜನೆ ಅಡಿ ಇದ್ದ ಮೂರು ಕೋಟಿ ರೂ. ಅನುದಾನ, ಜಿಲ್ಲಾ ಉಸ್ತುವಾರಿ ಸಚಿವರಾದ ಕೆಜೆ ಜಾರ್ಜ್ ಅವರು ಸಿಎಸ್‌ಆರ್ ನಿಧಿ ಅಡಿ ನೀಡಿದ ಎರಡು ಕೋಟಿ ರೂ., ಸರ್ಕಾರದಿಂದ ೧.೯೦ ಕೋಟಿ ರೂ. ಹಾಗೂ ಮುಖ್ಯಮಂತ್ರಿಗಳು ನೀಡಿರುವ ಒಂದು ಕೋಟಿ ರೂ. ವಿಶೇಷ ಅನುದಾನ ಸೇರಿಸಿ ಒಟ್ಟು ೭.೯೦ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ವಿವರಿಸಿದರು.
ಆದಷ್ಟು ಬೇಗನೆ ಸಿಂಥೆಟಿಕ್ ಟ್ರಾö್ಯಕ್ ಕಾಮಗಾರಿ ಪೂರ್ಣಗೊಳಿಸುತ್ತೇವೆ. ಇದಲ್ಲದೆ ಕ್ರೀಡಾಂಗಣದಲ್ಲಿ ಪೆವಿಲಿಯನ್ ಹಾಗೂ ಲೈಟಿಂಗ್ ವ್ಯವಸ್ಥೆ ಮಾಡುವ ಯೋಜನೆ ಇದೆ. ಈ ಕಾಮಗಾರಿಗಳನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಡಿಸಿ ಎನ್.ಎಂ.ನಾಗರಾಜ್, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ, ಸಿಡಿಎ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನAದ ಸ್ವಾಮಿ ಮತ್ತಿತರರಿದ್ದರು.