ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಬಾಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬಾಣೂರು ಶಿವಪುರ ಗ್ರಾಮದಲ್ಲಿ ೬೫ ಲಕ್ಷ ರೂ. ವೆಚ್ಚದಲ್ಲಿ ಆಯುಷ್ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಚ್.ಡಿ.ತಮ್ಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ವಿಶ್ವನಾಥ್, ಉಮಾಕಾಂತ್, ಧನಂಜಯ್, ನಟೇಶ್, ಮಲ್ಲಿಕಾರ್ಜುನ ಮತ್ತಿತರರಿದ್ದರು.
- ಗ್ರಾಮೀಣ ಭಾಗದಲ್ಲಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡುವ ಮಹತ್ವದ ಯೋಜನೆ
- ವಿಧಾನಸಭಾ ಕ್ಷೇತ್ರಕ್ಕೆ ತಲಾ ೬೫ ಲಕ್ಷ ರೂ. ವೆಚ್ಚದಲ್ಲಿ ೧೭ ಅಯುಷ್ ಆಸ್ಪತ್ರೆ
- ಆಸ್ಪತ್ರೆ ಕಟ್ಟಡ ಗುಣಮಟ್ಟದಿಂದ ನಿರ್ಮಾಣವಾಗಬೇಕು
ಚಿಕ್ಕಮಗಳೂರು: ರಾಜ್ಯಸರ್ಕಾರ ಬಡವರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡುವ ಮಹತ್ವದ ಯೋಜನೆಗಳನ್ನು ಕೈಗೊಂಡಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.
ವಿಧಾನಸಭಾ ಕ್ಷೇತ್ರದ ಬಾಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬಾಣೂರು ಶಿವಪುರ ಗ್ರಾಮದಲ್ಲಿ ೬೫ ಲಕ್ಷ ರೂ. ವೆಚ್ಚದಲ್ಲಿ ಆಯುಷ್ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಕೇಂದ್ರ ಮತ್ತು ರಾಜ್ಯಸರ್ಕಾರದ ಅನುದಾನದಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ತಲಾ ೬೫ ಲಕ್ಷ ರೂ. ವೆಚ್ಚದಲ್ಲಿ ೧೭ ಅಯುಷ್ ಆಸ್ಪತ್ರೆಗಳು ಮಂಜೂರಾಗಿವೆ. ಈಗಾಗಲೇ ೭ ಆಸ್ಪತ್ರೆಗಳಿಗೆ ನಿವೇಶನ ಗುರುತಿಸಿ ಟೆಂಡರ್ ಕರೆಯಲಾಗಿದೆ. ಇನ್ನು ಉಳಿದ ೧೦ ಆಸ್ಪತ್ರೆಗಳಿಗೆ ಜಾಗ ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದರು.
ಆಸ್ಪತ್ರೆ ಕಟ್ಟಡ ಗುಣಮಟ್ಟದಿಂದ ನಿರ್ಮಾಣವಾಗಬೇಕು. ನಿರ್ಮಾಣದ ಬಳಿಕ ಆಸ್ಪತ್ರೆಗೆ ಓರ್ವ ಆಯುಷ್ ವೈದ್ಯರನ್ನು ನೇಮಕ ಮಾಡಲಾಗುವುದು. ಇದರಿಂದ ಚಿಕ್ಕಬಾಣೂರು, ಗುಬ್ಬಿಹಳ್ಳಿ, ಬ್ರಹ್ಮಸಮುದ್ರ, ಮಂಜೀಹಳ್ಳಿ ಮುಂತಾದ ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಆರೋಗ್ಯವೇ ಭಾಗ್ಯ. ಆರೋಗ್ಯವನ್ನು ಕಳೆದುಕೊಂಡರೆ ಜೀವನವೇ ಇಲ್ಲದಂತಾಗುತ್ತದೆ. ಆದ್ದರಿಂದ ವೈದ್ಯೋ ನಾರಾಯಣ ಹರಿ ಎಂಬAತೆ ವೈದ್ಯರು ಜನಸೇವೆ ಮಾಡಬೇಕು. ದಾದಿಯರು ಮತ್ತು ಆಶಾ ಕಾರ್ಯಕರ್ತೆಯರು ಸಮಾಜ ಸೇವೆಗೆ ಮುಂದಾಗಬೇಕು ಎಂದು ಕರೆನೀಡಿದರು.
ಗ್ರಾಮೀಣ ಭಾಗದ ಜನರು ತಮ್ಮ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.
ಸರ್ಕಾರ ಯಾವುದೇ ಇರಲಿ ಜನಪ್ರತಿನಿಧಿಗಳಾಗಿ ಅನುದಾನ ತರುವ ಕೆಲಸವನ್ನು ದೇವಸ್ಥಾನದಲ್ಲಿ ಪೂಜಾರಿ ಮಾಡುವ ಕೆಲಸದಂತೆ ನಿರ್ವಹಿಸಬೇಕು. ಸಾಮಾನ್ಯ ಜನರಿಂದ ಶ್ರೀಮಂತರವರೆಗೆ ತೆರಿಗೆ ಪಾವತಿಸುವ ಹಣವನ್ನು ಸಾಮಾಜಿಕವಾಗಿ ಒಳ್ಳೆಯ ಕೆಲಸಗಳಿಗೆ ಬಳಸಬೇಕು ಎಂಬ ಗುರಿಹೊಂದಲಾಗಿದೆ ಎಂದರು.
ಎಲ್ಲ ವರ್ಗದ ಬಡವರು, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ಷೇತ್ರದಾದ್ಯಂತ ಜನಪರವಾದ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳ ಜೊತೆಗೆ ಸರ್ಕಾರ ಅಭಿವೃದ್ಧಿಗೂ ಅನುದಾನ ನೀಡುತ್ತಿದೆ ಎಂದು ಹೇಳಿದರು.
ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಈಗಾಗಲೇ ೫೦ ಬೆಡ್‌ನ ಆಸ್ಪತ್ರೆ ಸಿದ್ಧಪಡಿಸಲಾಗಿದ್ದು, ಈ ಬಗ್ಗೆ ನಿನ್ನೆ ನಡೆದ ಕೆಡಿಪಿ ಸಭೆಯಲ್ಲಿ ಚರ್ಚಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಶೀಘ್ರದಲ್ಲಿ ಭೇಟಿಮಾಡಿ ಉದ್ಘಾಟನೆ ದಿನಾಂಕ ನಿಗಧಿ ಮಾಡುವುದಾಗಿ ತಿಳಿಸಿದರು.
ಈಗಾಗಲೇ ಜಿಲ್ಲೆಯಲ್ಲಿ ಆಯುಷ್ ವೈದ್ಯರ ಕೊರತೆ ಇದ್ದು, ೧೨ ವೈದ್ಯರ ನೇಮಕಾತಿ ಮಾಡಬೇಕೆಂಬ ಸಂದರ್ಭದಲ್ಲಿ ಒಳಮೀಸಲಾತಿ ಸಮಸ್ಯೆಯಿಂದಾಗಿ ನೇಮಕಾತಿ ರದ್ದಾಗಿದೆ. ಏ. ೯ರ ಉಪಚುನಾವಣೆ ನಂತರ ವೈದ್ಯರ ನೇಮಕ ಮಾಡಿಕೊಳ್ಳುವುದಾಗಿ ಭರವಸೆ ನೀಡಿದರು.
ಬಯಲು ಭಾಗದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಟಾಸ್ಕ್ ಫೋರ್ಸ್ ಸಭೆ ನಡೆದಿದ್ದು, ಅವಶ್ಯಕತೆ ಇರುವ ಕಡೆ ಬೋರ್‌ವೆಲ್‌ಗಳ ಮೂಲಕ ನೀರು ಸರಬರಾಜು ಮಾಡಲು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿz್ದೆÃನೆ ಎಂದರು.
ಕಾರ್ಯಕ್ರಮದಲ್ಲಿ ಆಸ್ಪತ್ರೆಗೆ ನಿವೇಶನ ನೀಡಿರುವ ದಾನಿ ವಿಶ್ವನಾಥ್, ಗ್ರಾಪಂ ಸದಸ್ಯರಾದ ಉಮಾಕಾಂತ್, ಮಾಜಿ ಅಧ್ಯಕ್ಷ ಧನಂಜಯ್, ನಟೇಶ್, ಮಲ್ಲಿಕಾರ್ಜುನ ಮತ್ತಿತರರು ಉಪಸ್ಥಿತರಿದ್ದರು.