ಬಾಳೆಹೊನ್ನೂರಿನ ನಿರ್ಮಲಾ ಕಾನ್ವೆಂಟ್‌ನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕೀಟಜನ್ಯ ರೋಗಗಳ ನಿಯಂತ್ರಣ ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕ ಭಗವಾನ್ ಮಾತನಾಡಿದರು. ಲವಿನಾ ಡಿಸೋಜಾ, ವಿನೋದ, ಕೀರ್ತಿ, ಮಂಜುಳಾ ಇದ್ದರು.
ಬಾಳೆಹೊನ್ನೂರು: ಪರಿಸರ ಸ್ವಚ್ಛತೆ, ಸೊಳ್ಳೆಗಳ ನಿಯಂತ್ರಣದಿಂದ ಮಾತ್ರ ಮಲೇರಿಯಾ, ಡೆಂೆ, ಆನೆಕಾಲು ಮುಂತಾದ ರೋಗಗಳನ್ನು ತಡೆಗಟ್ಟಬಹುದು ಎಂದು ಹಿರಿಯ ಆರೋಗ್ಯ ನಿರೀಕ್ಷಕ ಭಗವಾನ್ ಹೇಳಿದರು.
ಪಟ್ಟಣದ ನಿರ್ಮಲಾ ಕಾನ್ವೆಂಟ್‌ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಆಯೋಜಿಸಿದ್ದ ರಾಷ್ಟ್ರೀಯ ಕೀಟಜನ್ಯ ರೋಗಗಳ ನಿಯಂತ್ರಣ ಕಾರ್ಯಕ್ರಮದಲ್ಲಿ ಮಾತನಾಡಿ, ಇದೀಗ ಮಳೆ ಪ್ರಾರಂಭವಾಗಿದ್ದು ತೆಂಗಿನ ಚಿಪ್ಪು, ಪ್ಲಾಸ್ಟಿಕ್‌ಡಬ್ಬಿ, ಹಳೇ ಟಯರ್ ಹಾಗೂ ಇನ್ನಿತರ ವಸ್ತುಗಳಲ್ಲಿ ನೀರು ನಿಂತಾಗ ಸೊಳ್ಳೆಗಳ ಉತ್ಪತ್ತಿಯಾಗುತ್ತದೆ. ಈ ಸೊಳ್ಳೆಗಳು ಕಚ್ಚುವುದರಿಂದ ಮಲೇರಿಯಾ ಜ್ವರ ಬರುತ್ತದೆ. ಡೆಂೆ ಜ್ವರ ಮಾರಕವಾಗಿದ್ದು ಸೊಳ್ಳೆಗಳು ಆರೋಗ್ಯವಂತ ಮನುಷ್ಯನನ್ನು ಕಚ್ಚಿದ 5ರಿಂದ 7 ದಿನದ ಒಳಗಾಗಿ ರೋಗ ಲಕ್ಷಣಗಳು ಕಂಡುಬರುತ್ತವೆ. ಡೆಂೆ ಲಕ್ಷಣ ಕಂಡುಬಂದಲ್ಲಿ ತಕ್ಷಣ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ತೆರಳಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆದುಕೊಂಡಲ್ಲಿ ರೋಗ ಗುಣವಾಗುತ್ತದೆ ಎಂದರು.
ವಿದ್ಯಾರ್ಥಿಗಳು ಮನೆ ಸುತ್ತಮುತ್ತ ಪರಿಸರ ಸ್ವಚ್ಛತೆ ಮಾಡಿಕೊಳ್ಳಬೇಕು. ರೋಗದ ಬಗ್ಗೆ ಪಾಲಕರಿಗೆ ತಿಳಿವಳಿಕೆ ನೀಡಬೇಕು ಎಂದು ಹೇಳಿದರು. ನಿರ್ಮಲಾ ಕಾನ್ವೆಂಟ್ ಮುಖ್ಯಶಿಕ್ಷಕಿ ಲವಿನಾ ಡಿಸೋಜಾ, ಆರೋಗ್ಯ ಇಲಾಖೆಯ ವಿನೋದ, ಕೀರ್ತಿ, ಆಶಾ ಕಾರ್ಯಕರ್ತೆ ಮಂಜುಳಾ ಮತ್ತಿತರರಿದ್ದರು.