ಎಚ್.ಯೂ.ಾರೂಕ್  
ಚಿಕ್ಕಮಗಳೂರು

ದೆಹಲಿ ಲಾಠಿ ಚಾರ್ಚ್ ಪ್ರಜಾಪ್ರಭುತ್ವದ ಕಗ್ಗೊಲೆ

ತರೀಕೆರೆ: ದೆಹಲಿಯ ಜಂತರ್ ಮಂತರ್‌ನಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಇನ್ನಿತರರ ಮೇಲೆ ನಡೆದ ಲಾಠಿ ಚಾರ್ಚ್ ನಡೆದಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯೂ.ಾರೂಕ್ ದೂರಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಳೆದ 15 ದಿನಗಳಿಂದ ಉಪವಾಸ ಸತ್ಯಗ್ರಹ ನಡೆಸುತ್ತಿರುವ ಲಡಾಕ್‌ನ ವಿಜ್ಞಾನಿ ಸೋನಂ ವಾಂಚೂ ಜತೆ ಪರೀಕ್ಷೆ ಬರೆದ ಹೊರತಾಗಿಯೂ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳು ವಿಚಲಿತರಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 20 ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತಿತರ ನಾಯಕರು ನಡೆಸಿದ ಮುಷ್ಕರ ಹತ್ತಿಕ್ಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಪೊಲೀಸರ ಮೂಲಕ ನಡೆಸಿರುವ ಲಾಠಿಚಾರ್ಚ್ ಯುವ ಪೀಳಿಗೆ ಭವಿಷ್ಯಕ್ಕೆ ಕೊಡಲಿ ಪೆಟ್ಟು ನೀಡುವಂತಿದೆ ಎಂದು ಸುದ್ದಿಗೋಷ್ಠಿಯಲ್ಲಿ ವಿಷಾದಿಸಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 1ಕೋಟಿ ರೂ. ಪರಿಹಾರ ನೀಡಬೇಕು. ತಕ್ಷಣ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆಯಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ದೇಶಾದ್ಯಂತ ಉಗ್ರ ಹೋರಾಟ ನಡೆಸಲಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಅನ್ಯಾಯಕ್ಕೊಳಗಾಗಿರುವ ವಿದ್ಯಾರ್ಥಿಗಳು ಎದುರಾಗುವ ಸವಾಲುಗಳನ್ನು ಸ್ವೀಕರಿಸಿ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಟಿ.ಎಸ್.ಪ್ರಕಾಶ್‌ವರ್ಮ, ಕಿಸಾನ್ ಸೆಲ್ ಅಧ್ಯಕ್ಷ ಟಿ.ಆರ್.ಗಿರೀಶ್, ಎಸ್ಸಿ ಸೆಲ್ ಅಧ್ಯಕ್ಷ ಗೌರೀಶ್, ಪುರಸಭೆ ಸದಸ್ಯರಾದ ಆದಿಲ್ ಪಾಷಾ, ಮಂಜುನಾಥ್ ಮತ್ತಿತರರಿದ್ದರು.