ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಗ್ಯಾರಂಟಿ ಯೋಜನೆಗಳ ಸಂವಾದ ಕಾರ್ಯಕ್ರಮಕ್ಕೆ ಕೊಳ್ಳೇಗಾಲ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ಚಾಲನೆ ನೀಡಿದರು. ರಾಚಯ್ಯ ಸವಿತಾ, ಜಗದೀಶ್ ನಾಯಕ, ಗುರುಶಾಂತಪ್ಪ ಬೆಳ್ಳುಂಡಗಿ ಇತರರು ಇದ್ದರು.
- ಸಂವಾದ ಕಾರ್ಯಕ್ರಮ
- ಕೊಳ್ಳೇಗಾಲ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ಹೇಳಿಕೆ
ಕೊಳ್ಳೇಗಾಲ: ತಾಲೂಕಿನ ಪಾಳ್ಯ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಗ್ಯಾರಂಟಿ ಯೋಜನೆಗಳ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಕೊಳ್ಳೇಗಾಲ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸರ್ಕಾರದ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಜನರು ಯಾವುದೇ ಗೊಂದಲಕ್ಕೆ ಒಳಗಾಗದೆ ಯೋಜನೆಗಳ ಸೌಲಭ್ಯ ಪಡೆಯಲು ಅಗತ್ಯ ಮಾಹಿತಿ ನೀಡುವಂತೆ ಸೂಚಿಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಇರಬೇಕು ಎಂದು ಸೂಚಿಸಿದರು.
ಹನೂರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಚಯ್ಯ ಮಾತನಾಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ತಲುಪುವಂತೆ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಪಾಳ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ, ಸದಸ್ಯ ಜಗದೀಶ್ ನಾಯಕ, ತಾಲೂಕು ಪಂಚಾಯಿತಿ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಸಿಡಿಪಿಒ ಕಚೇರಿ ಮೇಲ್ವಿಚಾರಕಿ ಶಿವಲೀಲಾ, ಆಹಾರ ಇಲಾಖೆಯ ಫುಡ್ ಇನ್‌ಸ್ಪೆಕ್ಟರ್ ಪ್ರಸಾದ್, ಕೆಎಸ್‌ಆರ್‌ಟಿಸಿ ಟಿಸಿ ಕೆಂಪರಾಜು, ಪಿಡಿಒ ಮರಿಸ್ವಾಮಿ , ಗ್ಯಾರಂಟಿ ಯೋಜನೆ ಸಮಿತಿ ಸದಸ್ಯರಾದ ಆರ್.ಮಹದೇವ, ಕೃಷ್ಣವೇಣಿ, ಮಾಜ್ ಉಲ್ಲಾ, ಸಿಗಬತ್ ಉಲ್ಲಾ, ಪರಶಿವ, ಪರಮೇಶ್ವರ್, ಶ್ರೀನಿವಾಸ್ ಮೂರ್ತಿ, ರಾಜೂಗೌಡ, ನಿಂಗರಾಜು, ಸಹನಾಪ್ರೀಯ ಮತ್ತಿತರಿದ್ದರು.