ಜೆಡಿಎಸ್ ರಾಷ್ಟಿçÃಯ ವಕ್ತಾರ ಸುಧಾಕರ್ ಎಸ್. ಶೆಟ್ಟಿ
ಚಿಕ್ಕಮಗಳೂರು: ಬೆಳೆ ವಿಮೆ ನೋಂದಣಿ ಅವಧಿಯನ್ನು ಆಗಸ್ಟ್ ೩೧ರ ವರೆಗೆ ವಿಸ್ತರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ತೋಟಗಾರಿಕಾ ಇಲಾಖೆ ಜಂಟಿ ನಿರ್ದೇಶಕಿ ಮಂಜುಳ ಅವರಿಗೆ ಜೆಡಿಎಸ್ ರಾಷ್ಟಿçÃಯ ವಕ್ತಾರ ಸುಧಾಕರ್ ಎಸ್. ಶೆಟ್ಟಿ ಮನವಿ ಸಲ್ಲಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೃಂಗೇರಿ ಕ್ಷೇತ್ರದ ರೈತರು ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳಲು ಎದುರಿಸುತ್ತಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಗಣಿಸಿ, ಬೆಳೆ ವಿಮೆ ನೋಂದಣಿ ಮಾಡುವ ಕೊನೆಯ ದಿನಾಂಕವನ್ನು ಮುಂದೂಡುವAತೆ ಸರ್ಕಾರಕ್ಕೆ ಒತ್ತಾಯಿಸಲಾಗಿದೆ ಎಂದು ತಿಳಿಸಿದರು.
ಶೃಂಗೇರಿ ಕ್ಷೇತ್ರದ ಅನೇಕ ರೈತರು ಇನ್ನೂ ಫ್ರೂಟ್ ಐಡಿ ಸಮಸ್ಯೆ, ಬೆಳೆಗಳ ಸರಿಯಾದ ನೋಂದಣಿ ಆಗದಿರುವುದು ಹಾಗೂ ವಿವಿಧ ತಾಂತ್ರಿಕ ತೊಂದರೆಗಳಿAದಾಗಿ ತೋಟಗಾರಿಕಾ ಇಲಾಖೆ ಮತ್ತು ತಾಲೂಕು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಈ ಕಾರಣದಿಂದ ಸಾವಿರಾರು ರೈತರು ಬೆಳೆ ವಿಮೆ ಸೌಲಭ್ಯದಿಂದ ವಂಚಿತರಾಗುವ ಆತಂಕವಿದೆ ಎಂದು ಹೇಳಿದರು.
ರೈತರ ಹಿತದೃಷ್ಟಿಯಿಂದ ಬೆಳೆ ವಿಮೆ ನೋಂದಣಿಗೆ ಇನ್ನೂ ೩೦ ದಿನಗಳ ಕಾಲಾವಕಾಶ ನೀಡಿ, ಆಗಸ್ಟ್ ೩೧ರವರೆಗೆ ಅವಧಿ ವಿಸ್ತರಣೆಗೆ ತೋಟಗಾರಿಕಾ ಇಲಾಖೆ ಹಾಗೂ ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಯಾವುದೇ ಅರ್ಹ ರೈತರು ಬೆಳೆ ವಿಮೆ ಸೌಲಭ್ಯದಿಂದ ವಂಚಿತರಾಗದAತೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ ಎಂದು ಹೇಳಿದರು.