ಎನ್.ಆರ್.ಪುರದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಪೂರ್ವಭಾವಿ ಸಭೆ ನಡೆಯಿತು.
ಎನ್.ಆರ್.ಪುರ: ಈ ಬಾರಿ ತಾಲೂಕಿನಲ್ಲಿ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ನಡೆಯಲಿದ್ದು, ಕಾರ್ಯಕ್ರಮದ ಯಶಸ್ವಿಗೆ ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳ ಸಹಕಾರ ಅಗತ್ಯ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ನಾಗರಾಜ್ ತಿಳಿಸಿದರು.
ಶನಿವಾರ ತಾಪಂ ಸಾಮರ್ಥ್ಯ ಸೌಧದಲ್ಲಿ ಜಿಲ್ಲಾ ಶಿಕ್ಷಕರ ದಿನಾಚರಣೆ ಆಯೋಜನೆ ಹಿನ್ನೆಲೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಎಂಟು ಬ್ಲಾಕ್‌ಗಳಾಗಿ ವಿಂಗಡಿಸಿದ್ದು, ಪ್ರತಿ ಬ್ಲಾಕ್‌ಗೆ ಒಂದೊಂದು ವರ್ಷ ಶಿಕ್ಷಕರ ದಿನಾಚರಣೆ ಆಯೋಜಿಸಲಾಗುತ್ತದೆ. ಈ ಬಾರಿ ನಿವೃತ್ತರಾದ ತಾಲೂಕಿನ ಶಿಕ್ಷಕರನ್ನು ಸನ್ಮಾನಿಸಲಾಗುವುದು. ಪ್ರತಿ ಬ್ಲಾಕ್‌ನಿಂದ 3 ಜನ ಶಿಕ್ಷಕರಂತೆ 8 ಬ್ಲಾಕ್‌ನಿಂದ 24ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಿ ಸನ್ಮಾನಿಸಲಾಗುವುದು. ಇಲಾಖೆಯಿಂದ ಜಿಲ್ಲಾಮಟ್ಟಕ್ಕೆ 30 ಸಾವಿರ, ತಾಲೂಕು ಮಟ್ಟಕ್ಕೆ 20 ಸಾವಿರದಂತೆ ಒಟ್ಟು 50 ಸಾವಿರ ಅನುದಾನ ನೀಡಲಾಗುತ್ತದೆ ಎಂದರು.
ಜಿಪಂ ಮಾಜಿ ಸದಸ್ಯ ಪಿ.ಆರ್.ಸದಾಶಿವ ಮಾತನಾಡಿ, ಜಿಲ್ಲಾಮಟ್ಟದ ದಿನಾಚರಣೆಯಲ್ಲಿ ಯಾವುದೇ ಕೊರತೆಯಾಗದಂತೆ ಅದ್ದೂರಿಯಾಗಿ ನೆರವೇರಿಸಬೇಕು. ಎಲ್ಲ ಇಲಾಖೆ ಅಧಿಕಾರಿಗಳು, ದಾನಿಗಳು ಸಹಕಾರ ನೀಡಬೇಕು. ಜನಪ್ರತನಿಧಿಗಳಾದ ನಮ್ಮ ಸಹಕಾರ ಸದಾ ಇರುತ್ತದೆ. ಪ್ರಸ್ತುತ ದಿನಗಳಲ್ಲಿ ಖಾಸಗಿ ಶಾಲೆಗಿಂತ ಸರ್ಕಾರಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ ಇದಕ್ಕೆ ಶಾಲಾ ಶಿಕ್ಷಕರು ಪ್ರಮುಖ ಕಾರಣ ಅದ್ದರಿಂದ ಅವರ ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿ ಆಚರಿಸೋಣ ಎಂದರು.
ಬಿಇಒ ಶಬಾನಾ ಅಂಜುಮ್ ಮಾತನಾಡಿ, ರಾಧಾಕೃಷ್ಣ ಅವರ ಜಯಂತಿಯನ್ನು 1988ರಿಂದಲೂ ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಅಂದು ಉತ್ತಮ ಶಿಕ್ಷಕರು ಹಾಗೂ ನಿವೃತ್ತಿ ಹೊಂದಿದ ಶಿಕ್ಷಕರನ್ನು ಅಭಿನಂದಿಸುವುದರಿಂದ ಉಳಿದ ಶಿಕ್ಷಕರಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ೀ ಬಾರಿ ತಾಲೂಕಿನಲ್ಲಿ ಜಿಲ್ಲಾಮಟ್ಟದ ಕಾರ್ಯಕ್ರಮ ನಡೆಯುತ್ತಿರುವುದರಿಂದ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ ಪಡೆದ ತಾಲೂಕಿನ 16 ಶಾಲೆಗಳ ಮುಖ್ಯಶಿಕ್ಷಕರಿಗೂ ಅಭಿನಂದಿಸಲು ನಿರ್ಧರಿಸಲಾಗಿದೆ. ಶಿಕ್ಷಕರ ದಿನಾಚರಣೆ ಮಹತ್ವ ಕುರಿತಾದ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು ಎಂದು ತಿಳಿಸಿದರು.
ತಾಪಂ ಇಒ ಎಚ್.ಡಿ.ನವೀನ್‌ಕುಮಾರ್ ಮಾತನಾಡಿ, ತಾಲೂಕಿನ ಎಲ್ಲ ಗ್ರಾಪಂಗಳಿಂದ ಸಹಕಾರ ನೀಡಲಾಗುವುದು. ಎಲ್ಲ ಇಲಾಖೆ ಅಧಿಕಾರಿಗಳೂ ಒಗ್ಗೂಡಿ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯನ್ನು ಯಶಸ್ವಿಯಾಗಿ, ಅದ್ದೂರಿಯಾಗಿ ಆಚರಿಸೋಣ ಎಂದು ಕರೆ ನೀಡಿದರು.
ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಈಚಿಕೆರೆ ಸುಂದರೇಶ್,ಕೆಡಿಪಿ ಸಭೆ ನಾಮನಿರ್ದೇಶಿತ ಸದಸ್ಯರಾದ ಮಾಳೂರು ದಿಣ್ಣೆರಮೇಶ್, ಕೆ.ವಿ.ಸಾಜು, ಅಂಜುಮ್, ಬಗರ್ ಹುಕುಂ ಸಮಿತಿ ಅಧ್ಯಕ್ಷ ಈ.ಸಿ.ಜೋಯಿ, ಕಡಹಿನಬೈಲು ಗ್ರಾಪಂ ಮಾಜಿ ಉಪಾಧ್ಯಕ್ಷ ಸುನೀಲ್‌ಕುಮಾರ್, ಪಪಂ ಮಾಜಿ ಅಧ್ಯಕ್ಷೆ ಜುಬೇದಾ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್.ಎಲ್.ಶೆಟ್ಟಿ, ಎನ್.ಎಲ್.ಮನೀಶ, ಸೇವ್ಯಾನಾಯ್ಕಾ, ಶಿಲ್ಪಾಕುಮಾರಿ, ರಾಜೇಶ್ವರಿ,ತಿಮ್ಮೇಶ್ ಇದ್ದರು.