ಆರ್ ವಿಆರ್ ಹೆಲ್ತ್ ಕೇರ್ ನಿಂದ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. ರಾಘವೇಂದ್ರ ನೇತೃತ್ವದಲ್ಲಿ ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯ ಆರ್.ಸಿ. ಕಂಫರ್ಟ್ಸ್ ಕಟ್ಟಡದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು. 
ಚಿಕ್ಕಮಗಳೂರು

ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು:
ಆರ್ ವಿಆರ್ ಹೆಲ್ತ್ ಕೇರ್ ನಿಂದ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. ರಾಘವೇಂದ್ರ ನೇತೃತ್ವದಲ್ಲಿ ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯ ಆರ್.ಸಿ. ಕಂಫರ್ಟ್ಸ್ ಕಟ್ಟಡದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು.
ಈ ಶಿಬಿರದಲ್ಲಿ ವಿವಿಧ ತಜ್ಞ ವೈದ್ಯರು ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ವೈದ್ಯಕೀಯ ಸಲಹೆ ಹಾಗೂ ಆರೋಗ್ಯ ಜಾಗೃತಿ ಮೂಡಿಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ನೂರಾರು ನಾಗರಿಕರು ಶಿಬಿರದ ಪ್ರಯೋಜನ ಪಡೆದರು.
ಈ ವೇಳೆ ಡಾ. ಬಿ.ಎಸ್‌. ರಾಘವೇಂದ್ರ ಮಾತನಾಡಿ, ರೋಗವನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿದರೆ ಪರಿಣಾಮಕಾರಿ ಚಿಕಿತ್ಸೆ ಸಾಧ್ಯ. ಸಾರ್ವಜನಿಕರು ನಿಯಮಿತ ಆರೋಗ್ಯ ತಪಾಸಣೆಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ವಿಜಯ್ ಎಂ.ಎನ್. ಶೆಟ್ಟಿ, ಆರೋಗ್ಯವಂತ ಸಮಾಜ ನಿರ್ಮಾಣ ನಮ್ಮ ಪ್ರಮುಖ ಧ್ಯೇಯವಾಗಿದೆ. ಪ್ರತಿಯೊಬ್ಬ ನಾಗರಿಕರೂ ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಗತ್ಯ. ಇದೇ ಉದ್ದೇಶದಿಂದ ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗುತ್ತಿದೆ" ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದೇ ರೀತಿಯ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುವುದಾಗಿ ಸಂಸ್ಥೆ ತಿಳಿಸಿದೆ.