ಅಳಲಗೆರೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಕೃಪಾಲ ಗೌಡ ಮಾತನಾಡಿದರು. ಪೂರ್ಣಿಮಾ, ರಮೇಶ್, ದರ್ಶನ್ ಇತರರಿದ್ದರು. 
ಚಿಕ್ಕಮಗಳೂರು

ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ

ಎಸ್.ಎನ್.ರವೀಂದ್ರ

ಪ್ರಮುಖ ಮುಖ್ಯಾಂಶಗಳು

  • ಅವಘಡ ನಿಯಂತ್ರಣ
  • ಸಂಜೆ ವೇಳೆ
ಎನ್.ಆರ್.ಪುರ: ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕವಾದ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ ಎಂದು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆ ಅಧ್ಯಕ್ಷ ಕೃಪಾಲ ಗೌಡ ತಿಳಿಸಿದರು.
ಅಳಲಗೆರೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಮಲೇರಿಯಾ ವಿರೋಧಿ ಮಾಸಾಚರಣೆ ಹಾಗೂ ಅಗ್ನಿ ಅವಘಡ ನಿಯಂತ್ರಣ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭರತ್ ಮಾತನಾಡಿ, ಸಂಜೆ ವೇಳೆ ವಿಪರೀತ ಜ್ವರ, ಮೈಕೈ ನೋವು, ಕಣ್ಣು ಕೆಂಪಾಗುವುದು ಮಲೇರಿಯಾ ಲಕ್ಷಣ. ಇಂಥ ಲಕ್ಷಣ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಸಾಕ್ಷ್ಯಚಿತ್ರದೊಂದಿಗೆ ಮಾಹಿತಿ ನೀಡಿದರು.
ಅಗ್ನಿಶಾಮಕ ದಳದ ಸಂತೋಷ್ ಅವರು ಅಗ್ನಿ ಅವಘಡ ಉಂಟಾದಾಗ ಅನುಸರಿಸಬೇಕಾದ ತುರ್ತು ಕ್ರಮಗಳ ಬಗ್ಗೆ ವಿವರಿಸಿದರು. 
ಮುರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲೆ ಪೂರ್ಣಿಮಾ, ಸೀನಿಯರ್ ಚೇಂಬರ್ ಸದಸ್ಯರಾದ ಪಿ.ಎಸ್.ವಿದ್ಯಾನಂದಕುಮಾರ್, ಕುಮಾರ್ ಜಿ. ಶೆಟ್ಟಿ, ಧನಂಜಯ, ಅಗ್ನಿಶಾಮಕ ದಳದ ಠಾಣಾಧಿಕಾರಿ ರಮೇಶ್, ಅಗ್ನಿ ಪ್ರಮುಖ ನವೀನ್, ಆರೋಗ್ಯ ನಿರೀಕ್ಷಣಾಧಿಕಾರಿ ದರ್ಶನ್, ಹರೀಶ್, ಸಮುದಾಯ ಆರೋಗ್ಯ ಅಧಿಕಾರಿ ರಾಹಿಲಾ, ಆಶಾ ಕಾರ್ಯಕರ್ತೆ ವೇದಾವತಿ, ರಾಮಮೋಹನ್, ಮಹಾತ್ಮಗಾಂಧಿ ಇದ್ದರು.