ಕಡೂರಿನಲ್ಲಿ ಸಮಾಜಕಲ್ಯಾಣ ಇಲಾಖೆಯ ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ನಿಲಯಗಳ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುರಿತು ಏರ್ಪಡಿಸಿದ್ದ ಕಾರ್ಯಾಗಾರವನ್ನು ಬಿಇಒ ಎಂ.ಎಚ್.ತಿಮ್ಮಯ್ಯ ಉದ್ಘಾಟಿಸಿದರು. ದೇವರಾಜ್, ನಟರಾಜ್, ಯಶ್ವಂತ್, ಮಧು ಮತ್ತಿತರಿದ್ದರು.
ಕಡೂರು: ವಿದ್ಯಾರ್ಥಿಗಳಿಗೆ ವ್ಯಾಸಂಗದ ವೇಳೆ ಗುರಿ ಬಹಳ ಮುಖ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ತಿಮ್ಮಯ್ಯ ತಿಳಿಸಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಸಮಾಜಕಲ್ಯಾಣ ಇಲಾಖೆಯ ಮೆಟ್ರಿಕ್‌ಪೂರ್ವ ವಿದ್ಯಾರ್ಥಿನಿಲಯಗಳ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುರಿತು ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಓದಿಗೆ ಹೆಚ್ಚು ಮಹತ್ವ ನೀಡಬೇಕಿದೆ. ಪ್ರಮುಖ ಘಟ್ಟದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಎಲ್ಲ ರೀತಿಯಲ್ಲೂ ಸಿದ್ಧರಾಗಬೇಕಿದೆ ಎಂದರು.
ಓದಿನಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸರ್ಕಾರ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಇವುಗಳ ಸದ್ಬಳಕೆ ಮಾಡಿಕೊಳ್ಳುವಲ್ಲಿ ವಿದ್ಯಾರ್ಥಿಗಳು ಮುಂದಾಗಬೇಕಿದೆ ಎಂದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ದೇವರಾಜ್ ಮಾತನಾಡಿ, ಎಸ್‌ಎಸ್‌ಎಲ್‌ಸಿ ಎಂಬುದು ವಿದ್ಯಾರ್ಥಿಗಳ ವ್ಯಾಸಂಗದ ಪ್ರಮುಖ ಘಟ್ಟವಾಗಿದೆ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಯಾವುದೇ ಒತ್ತಡವಿಲ್ಲದೆ ನಿರರ್ಗಳವಾಗಿ ಕಲಿಕೆಗೆ ಹೆಚ್ಚು ಸಮಯಾವಕಾಶ ಲಭಿಸುತ್ತಿದೆ ಎಂದರು.
ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಟರಾಜ್ ಮಾತನಾಡಿ, ತಾಲೂಕಿನ ಇಲಾಖೆ ವ್ಯಾಪ್ತಿಯ 155ಕ್ಕೂ ಹೆಚ್ಚು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಲಿತಾಂಶ ವೃದ್ಧಿಗೊಳ್ಳಲು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಈ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತಿಹೆಚ್ಚು ಅಂಕ ಪಡೆಯುವ ನಿಲಯದ ನಾಲ್ವರು ವಿದ್ಯಾರ್ಥಿಗಳಿಗೆ ಟ್ಯಾಬ್‌ಗಳನ್ನು ಬಹುಮಾನವಾಗಿ ನೀಡಲಾಗುತ್ತದೆ ಎಂದರು.
ವಿಜ್ಞಾನ, ಇಂಗ್ಲಿಷ್ ಹಾಗೂ ಗಣಿತ ವಿಷಯವಾರು ಸಂಪನ್ಮೂಲ ವ್ಯಕ್ತಿಗಳಾದ ದೋರನಾಳು ಮಧು, ಯಶ್ವಂತ್, ಜಿ.ಎಂ.ಯತೀಶ್ ಮಕ್ಕಳಿಗೆ ಪರೀಕ್ಷೆ ಎದುರಿಸುವ ಕುರಿತು ವಿವರಿಸಿದರು. ಬೀರೂರು ಶಿಕ್ಷಣ ಇಲಾಖೆಯ ಶೇಖರಪ್ಪ, ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಲಯಗಳ ಮೇಲ್ವಿಚಾರಕರಾದ ರಾಜು ಒಡೆಯರ್, ಶಿವಕುಮಾರ್, ಸೋಮೇಶ ಪ್ರಸನ್ನ, ನಿತ್ಯಾನಂದ್, ಮಂಜುನಾಥ್, ಶಶಿಧರ್, ಸಾವಿತ್ರಮ್ಮ, ಕಮಲಾಕ್ಷಿ, ಚಂದ್ರಯ್ಯ ಮತ್ತು ಸಿಬ್ಬಂದಿ ಇದ್ದರು.