ಚಿಕ್ಕಮಗಳೂರು ಜ್ಯೋತಿನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಡಿಸಿ ಭನ್ವರ್ ಸಿಂಗ್ ಮೀನಾ ಸಸಿ ನೆಡುವ ಮೂಲಕ ಉದ್ಘಾಟಿಸಿದರು.
- ನಾವು ಕೇವಲ ಗಿಡಗಳನ್ನು ನೆಡುವುದಷ್ಟೇ ಪರಿಸರ ದಿನಾಚರಣೆಯಲ್ಲ
- ಪರಿಸರವನ್ನು ಒಂದು ಸಮಗ್ರ ಜೀವ ವ್ಯವಸ್ಥೆಯಾಗಿ ನೋಡಬೇಕು
ಚಿಕ್ಕಮಗಳೂರು: ನಾವು ಕೇವಲ ಗಿಡಗಳನ್ನು ನೆಡುವುದಷ್ಟೇ ಪರಿಸರ ದಿನಾಚರಣೆಯಲ್ಲ. ಪರಿಸರವನ್ನು ಒಂದು ಸಮಗ್ರ ಜೀವ ವ್ಯವಸ್ಥೆಯಾಗಿ ನೋಡಬೇಕು. ಇದರಲ್ಲಿರುವ ನಮ್ಮ ಜವಾಬ್ದಾರಿ ಹಾಗೂ ಮಿತಿಗಳನ್ನು ಮೀರಿ ನಡೆದರೆ ಇಡೀ ಪರಿಸರದ ಸಮತೋಲನವೇ ಏರುಪೇರಾಗಲಿದೆ ಎಂದು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ತಿಳಿಸಿದರು.
ನಗರದ ಜ್ಯೋತಿನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಮೂಲಭೂತ ಕರ್ತವ್ಯ. ಕಾಡುಗಳು, ಕೆರೆ-ಕಟ್ಟೆಗಳು ಸೇರಿದಂತೆ ಪ್ರತಿಯೊಂದು ಪರಿಸರ ಘಟಕವನ್ನು ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಪರಿಸರ ಎಂದರೆ ಕೇವಲ ಸಸ್ಯ ನೆಡುವುದು ಮಾತ್ರವಲ್ಲ. ಇದೊಂದು ಸೂಕ್ಷö್ಮ ಜೀವ ಸರಪಳಿ. ಕಾಡಿನ ಮರಗಳು, ಹುಲ್ಲುಗಾವಲು, ಜಲಮೂಲಗಳು ಹಾಗೂ ಹುಲಿಗಳಂತಹ ಪ್ರಾಣಿಗಳಷ್ಟೇ ಅಲ್ಲದೆ, ಕಣ್ಣಿಗೆ ಕಾಣದ ಸೂಕ್ಷö್ಮಜೀವಿಗಳೂ ಈ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ನಾವೂ ಸಹ ಈ ಜೀವ ವ್ಯವಸ್ಥೆಯ ಒಂದು ಭಾಗವೇ ಆಗಿz್ದೆÃವೆ. ಜೀವ ವ್ಯವಸ್ಥೆಯ ಯಾವುದೇ ಒಂದು ಸಣ್ಣ ಘಟಕಕ್ಕೆ ತೊಂದರೆಯಾದರೂ ಇಡೀ ಪರಿಸರದ ಸಮತೋಲನ ತಪ್ಪುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಪರಿಸರ ಕೇಂದ್ರಿತ ಸಕಾರಾತ್ಮಕ ದೃಷ್ಟಿಕೋನ ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳೂ ಆದ ವಿ.ಹನುಮಂತಪ್ಪ, ಅಪರ ಜಿಲ್ಲಾಧಿಕಾರಿ ನಂಜುAಡೇಗೌಡ, ಉಪವಿಭಾಗಾಧಿಕಾರಿ ನಟೇಶ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಮ್ಮರಾಜು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ರಾಜುಗೌಡ, ಅರಣ್ಯ ಇಲಾಖೆಯ ಎಸಿಎಫ್ ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ, ಜಿಲ್ಲಾ ವಿಜ್ಞಾನ ಕೇಂದ್ರದ ಅಧ್ಯಕ್ಷ ಸತ್ಯನಾರಾಯಣ, ಉಪಾಧ್ಯಕ್ಷ ಎಚ್.ಎಂ.ಓAಕಾರಪ್ಪ, ಸಂತ ಜೋಸೆಫರ ಪ್ರೌಢಶಾಲೆಯ ಮುಖ್ಯಶಿಕ್ಷಕ ರೋನಾಲ್ಡ್ ಲೂಯಿಸ್ ಸೇರಿದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.