ಬಾಳೆಹೊನ್ನೂರು: ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀವೀರಭದ್ರ ಸ್ವಾಮಿ ಮಹಾರಥೋತ್ಸವದ ಅಂಗವಾಗಿ ಶ್ರೀಜಗದ್ಗುರು ರಂಭಾಪುರಿ ಪೀಠದಲ್ಲಿ 27ರಿಂದ ಮಾ.3 ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಶ್ರೀ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಪ್ರತಿದಿನದ ಕಾರ್ಯಕ್ರಮಗಳು ನಡೆಯಲಿದ್ದು, ಫೆ.27ರಂದು ಧ್ವಜಾರೋಹಣ ಹರಿದ್ರಾ ಲೇಪನದೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. 28ರಂದು ಸಂಜೆ 6.30ಕ್ಕೆ ಧರ್ಮ ಮತ್ತು ಶಿಕ್ಷಣ ಕುರಿತ ಗೋಷ್ಠಿಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಲಿದ್ದು, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಎಚ್.ಎಂ.ಲೋಕೇಶ್, ಯು.ಎಂ.ಬಸವರಾಜ, ಎಚ್.ಬಿ.ರಾಜಗೋಪಾಲ, ಸುಧೀರ್, ಬಿ.ಜಗದೀಶ್ಚಂದ್ರ, ಕೋಕಿಲ ಲಿಂಗಪ್ಪಗೌಡ, ಮಹೇಶ ಆಚಾರ್ಯ, ಎಲ್.ರವಿ ಭಾಗವಹಿಸಲಿದ್ದಾರೆ.
ಮಾ.1ರಂದು ಬೆಳಗ್ಗೆ 10.30ಕ್ಕೆ ರಂಭಾಪುರಿ ಪೀಠದ ಪರಿಸರದಲ್ಲಿ 51ಅಡಿ ಶ್ರೀಜಗದ್ಗುರು ರೇಣುಕಾಚಾರ್ಯ ಮಂಗಲ ಮೂರ್ತಿ ಪ್ರತಿಷ್ಠಾಪನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೂಮಿ ಪೂಜೆ ನೆರವೇರಿಸುವರು. ಬೆಳಗ್ಗೆ 11ಕ್ಕೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಶಿವಾದ್ವೈತ ಸಮಾವೇಶವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು. ಕೇಂದ್ರ ಸಚಿವ ಸಚಿವ ಪ್ರಲ್ಹಾದ ಜೋಷಿ ರಂಭಾಪುರಿ ಬೆಳಗು ಮಾಸಿಕ ಬಿಡುಗಡೆಗೊಳಿಸುವರು. ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಸಂಸದರಾದ ಬಸವರಾಜ ಬೊಮ್ಮಾಯಿ, ಕೋಟಾ ಶ್ರೀನಿವಾಸ್ ಪೂಜಾರಿ, ಡಾ.ಪ್ರಭಾ ಮಲ್ಲಿಕಾರ್ಜುನ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಟಿ.ಡಿ.ರಾಜೇಗೌಡ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಶಾಸಕ ಜಿ.ಎಚ್. ಶ್ರೀನಿವಾಸ್, ಮಾಜಿ ಸಚಿವ ಡಿ.ಎನ್. ಜೀವರಾಜ್ ಮತ್ತಿತರರು ಭಾಗವಹಿಸಲಿದ್ದಾರೆ.
ಸಾಹಿತ್ಯ ಸಂಶೋಧಕ ವಿಷಯ ತಜ್ಞ ಶಿಕ್ಯಾಗೋ ನಿವಾಸಿ ರವಿ ಹಂಜಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಅಧ್ಯಕ್ಷ ಸಿಂದಗಿಯ ಡಾ.ಪ್ರಭು ಸಾರಂಗದೇವ ಶಿವಾಚಾರ್ಯರು, ಶಿವಗಂಗಾ ಕ್ಷೇತ್ರದ ಡಾ.ಮಲಯ ಶಾಂತಮುನಿ ಶಿವಾಚಾರ್ಯರು, ಸೂಡಿ ಜುಕ್ತಿ ಹಿರೇಮಠದ ಡಾ.ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು ಉಪಸ್ಥಿತರಿರುವರು. ಸಂಜೆ ಗದಗಿನ ಪಂ.ಡಾ.ರಾಜಗುರು ಗುರುಸ್ವಾಮಿ ಕಲಕೇರಿ ಅವರಿಂದ ಸಂಗೀತ ಸೌರಭ ನಡೆಯಲಿದ್ದು, ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯರು ಉದ್ಘಾಟಿಸುವರು. ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್.ಚನ್ನಕೇಶವ, ಎಂಎಡಿಬಿ ಮಾಜಿ ಅಧ್ಯಕ್ಷೆ ಬಿ.ಸಿ.ಗೀತಾ, ಯಡ್ರಾಮಿಯ, ಚಂದ್ರಶೇಖರ ಪುರಾಣಿಕ ಭಾಗವಹಿಸಲಿದ್ದಾರೆ.
ಮಾ.2ರಂದು ಸಂಜೆ ಧರ್ಮ ಮತ್ತು ಮಹಿಳೆ ಕುರಿತ ವಿಚಾರ ಗೋಷ್ಠಿ ನಡೆಯಲಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ.
ಸಮಾರಂಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಉಪಾಧ್ಯಕ್ಷೆ ಚಂದ್ರಕಲಾ ಬಿ.ಕೆ. ಬೆಳ್ಳಾವರ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಹಿಳಾ ರಾಜ್ಯ ಘಟಕದ ಉಪಾಧ್ಯಕ್ಷೆ ರಾಜೇಶ್ವರಿ ನಾಗರಾಜ್, ಆಲ್ದೂರಿನ ವನಮಾಲಾ ಮೃತ್ಯುಂಜಯ, ಹುಬ್ಬಳ್ಳಿ ಶ್ರೀಪಾರ್ವತಿ ಮಹಿಳಾ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಇಂಧುಮತಿ ಮಾನ್ವಿ ಭಾಗವಹಿಸಲಿದ್ದಾರೆ ಎಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ ತಿಳಿಸಿದ್ದಾರೆ.