ತರೀಕೆರೆಯಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಪುರಸಭೆ ಅಧ್ಯಕ್ಷ ವಸಂತ್‌ಕುಮಾರ್ ಚಾಲನೆ ನೀಡಿದರು.  
ಚಿಕ್ಕಮಗಳೂರು

ನಿಜವಾದ ಪತ್ರಕರ್ತರಿಗೆ ಸೌಲಭ್ಯಗಳು ದೊರೆಯಲಿ

ತರೀಕೆರೆ: ಪತ್ರಕರ್ತರನ್ನು ಅವರ ವಿವೇಚನೆಗೆ ಬಂದಂತೆ ಬಿಂಬಿಸುವಂಥ ಕಾಲ ಬಂದಿದೆ ಎಂದು ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ನರೇಂದ್ರ ಹೇಳಿದರು.
ಪಟ್ಟಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಶಾಖೆಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿ, ನೈಜ ಪತ್ರಕರ್ತರಿಗೆ ವಿವಿಧ ಸೌಲಭ್ಯ ಸಿಗಬೇಕು. ಕಾರ್ಯನಿರತ ಪತ್ರಕರ್ತರು ಸಮಾಜದ ಸ್ವಾಸ್ಥೃ ಕಾಪಾಡುವ ಜತೆಗೆ ವೃತ್ತಿಧರ್ಮ ಪ್ರಾಮಾಣಿಕತೆಯಿಂದ ಪಾಲಿಸಬೇಕು ಎಂದರು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಆನಂದ್ ಮಾತನಾಡಿ, ಮುದ್ರಣ ಮಾಧ್ಯಮ ಸಾಮಾಜಿಕ ಜಾಲತಾಣದ ಭರಾಟೆಯಲ್ಲಿ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಪತ್ರಕರ್ತರು ನೈಜತೆ ಮೂಲಕ ಸಮಾಜ ತಿದ್ದುವ ಕಾಯಕದಲ್ಲಿ ತೊಡಗಿಕೊಳ್ಳಬೇಕು. ಓದುಗರು ತಾಂತ್ರಿಕತೆಯಿಂದ ಉಂಟಾಗುತ್ತಿರುವ ಗೊಂದಲಗಳನ್ನು ಅರಿತು ಪತ್ರಿಕೆಗಳನ್ನು ಬೆಂಬಲಿಸುವ ಜತಗೆ ಮಕ್ಕಳಲ್ಲಿ ಓದುವ ಹವ್ಯಾಸ ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಸರ್ಜನ್ ಡಾ.ಟಿ.ಎಂ.ದೇವರಾಜ್ ಮಾತನಾಡಿ, ಪತ್ರಕರ್ತರಿಗೆ ನಿವೇಶನ ಹಂಚಿಕೆ ಮಾಡಲು ಗುರುತಿಸಿರುವ 2.30 ಎಕರೆ ಜಾಗದಲ್ಲಿ ಸಂಘ, ಶಾಲೆ ತೆರೆಯಲು ಯೋಜನೆ ರೂಪಿಸಬೇಕು ಎಂದು ಸಲಹೆ ನೀಡಿದರು.
ಪುರಸಭೆ ಅಧ್ಯಕ್ಷ ವಸಂತ್‌ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯು.ಾರೂಕ್, ಜಿಲ್ಲಾ ಜಾನಪದ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಎಂ.ಎಸ್.ವಿಶಾಲಾಕ್ಷಮ್ಮ, ರೋಟರಿ ಕ್ಲಬ್ ಅಧ್ಯಕ್ಷ ಕೆ.ಪಿ.ಕುಮಾರ್, ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರದೀಪ್‌ಕುಮಾರ್, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಸಿದ್ದರಾಮಪ್ಪ, ಹಿರಿಯ ಪತ್ರಕರ್ತ ನಾಗಭೂಷಣ್ ಮತ್ತಿತರರಿದ್ದರು.