ಅರಣ್ಯ ಸಚಿವ ಈಶ್ವರ ಖಂಡ್ರೆ 
ಚಿಕ್ಕಮಗಳೂರು

ಬಿಜೆಪಿ ಅತ್ಮಾವಲೋಕನ ಮಾಡಿಕೊಳ್ಳಲಿ

ನಿತ್ಯಾನಂದ ಎಸ್.ಎನ್.

ಪ್ರಮುಖ ಮುಖ್ಯಾಂಶಗಳು

  • ವಿದ್ಯತ್‌ ದರ ಏರಿಕೆ ಬಗ್ಗೆ ಟೀಕಿಸುತ್ತಿರುವ ಬಿಜೆಪಿ ನಾಯಕರಿಗೆ ಸಲಹೆ
  • ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ಸಚಿವ ಈಶ್ವರ ಖಂಡ್ರೆ
ಚಿಕ್ಕಮಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಬಗ್ಗೆ ಟೀಕೆ ಮಾಡುತ್ತಿರುವ ಬಿಜೆಪಿ ನಾಯಕರು ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಬಗ್ಗೆ ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಬಿಜೆಪಿ ವಿರುದ್ಧ ಕಿಡಿಕಾರಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 400 ರೂ. ಇದ್ದ ಸಿಲಿಂಡರ್ ಬೆಲೆ ಈಗ ಒಂದು ಸಾವಿರ ರೂ. ದಾಟಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿದರೂ ಭಾರತದಲ್ಲಿ ಬೆಲೆ ಹೆಚ್ಚುತ್ತಿದೆ ಎಂದು ದೂರಿದರು.
ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಬಡವರ ಹಣ ಲೂಟಿ ಮಾಡಲಾಗುತ್ತಿದೆ. ರಾಜ್ಯ ಬಿಜೆಪಿ ನಾಯಕರು ದೆಹಲಿಯಲ್ಲಿ ತಮ್ಮ ಹಕ್ಕು ಕೇಳಲಿ. ಅದನ್ನು ಬಿಟ್ಟು ಇಲ್ಲಿ ಟೀಕೆ ಮಾಡುವುದು ಸರಿಯಲ್ಲ ಎಂದು ಲೇವಡಿ ಮಾಡಿದರು.
ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ. ಕೆಲವೊಂದು ಸಣ್ಣಪುಟ್ಟ ಅಸಮಾಧಾನ ಇದ್ದೇ ಇರುತ್ತದೆ. ಕಾಂಗ್ರೆಸ್ ಎಲ್ಲರಿಗೂ ಸಮಾನ ಅವಕಾಶ ನೀಡಿದೆ ಎಂದು ಹೇಳಿದರು.
ಕಾಂಗ್ರೆಸ್ ಬಗ್ಗೆ ಬಿಜೆಪಿ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ಕಾಂಗ್ರೆಸ್ ಎಂದೆಂದಿಗೂ ಮಹಿಳೆಯರ ಪರವಾಗಿಯೇ ಇದೆ. ಆದರೆ ಬಿಜೆಪಿ ಮಹಿಳಾ ವಿರೋಧಿ ಎಂದು ಟೀಕಿಸಿದರು.