ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯ ಅವರು ಜನ್ಮದಿನದ ಅಂಗವಾಗಿ ಹಿರೇಮಗಳೂರಿನ ಶ್ರೀಕೋದಂಡರಾಮಚಂದ್ರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
- ಶಾಸಕ ಎಚ್.ಡಿ. ತಮ್ಮಯ್ಯ ಹುಟ್ಟು ಹಬ್ಬ
- ಸಂಭ್ರಮದಿಂದ ಆಚರಿಸಿದ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಮಗಳೂರು: ಶಾಸಕ ಎಚ್.ಡಿ. ತಮ್ಮಯ್ಯ ಹುಟ್ಟು ಹಬ್ಬವನ್ನು ಭಾನುವಾರ ಅವರ ಅಭಿಮಾನಿಗಳು, ಸ್ನೇಹಿತರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಡಗರ, ಸಂಭ್ರಮದಿಂದ ಆಚರಿಸಿದರು.
ಚಿಕ್ಕಮಗಳೂರು ನಗರಸಭೆಯ ಆಯುಕ್ತ ಬಿ.ಸಿ. ಬಸವರಾಜ್ ಅವರ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ತಂದಿದ್ದ ಕೇಕ್‌ವನ್ನು ಶಾಸಕ ಎಚ್.ಡಿ. ತಮ್ಮಯ್ಯ ಕಟ್ ಮಾಡಿದರು. ಇದೇ ಸಂದರ್ಭದಲ್ಲಿ ಶಾಸಕರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.
ವಿವಿಧ ಇಲಾಖೆಯ ಅಧಿಕಾರಿಗಳು, ಸಂಘಟನೆಗಳ ಮುಖಂಡರು, ಶಾಸಕರ ನಿವಾಸಕ್ಕೆ ಆಗಮಿಸಿ ಶುಭಾಶಯ ತಿಳಿಸಿದರು. ಜನ್ಮದಿನದ ಅಂಗವಾಗಿ ಶಾಸಕರ ನಿವಾಸದ ಬಳಿ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ಶಿಬಿರವನ್ನು ಉದ್ಘಾಟಿಸಿದ ಬಳಿಕ ಶಾಸಕ ಎಚ್.ಡಿ. ತಮ್ಮಯ್ಯ ಪತ್ನಿ ಮಂಗಳ ಅವರೊಂದಿಗೆ ಹಿರೇಮಗಳೂರಿನ ಶ್ರೀ ಕೊದಂಡರಾಮಚಂದ್ರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಜಿಲ್ಲಾ ಕಾಂಗ್ರೇಸ್ ಪಕ್ಷದ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ ಹಾಗೂ ಸ್ಥಳೀಯ ಯುವಕರು ಬೃಹತ್ ಗಾತ್ರದ ಹೂವಿನ ಹಾರವನ್ನು ಹಾಕುವ ಜತೆಗೆ ಪುಷ್ಪಾರ್ಚನೆ ಮಾಡಿದರು.
ನಂತರ ಶಾಸಕರು ಸಖರಾಯಪಟ್ಟಣಕ್ಕೆ ತೆರಳಿದಾಗ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಮಹಡಿಮನೆ ಸತೀಶ್ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಶುಭಾಶಯ ಕೋರಿದರು.
ಬಳಿಕ ಶಾಸಕರು ದೇವನೂರು ಗ್ರಾಮಕ್ಕೆ ತೆರಳುವಾಗ ನಾಗರಾಳು ಬಳಿ ಕೇಕ್ ಕತ್ತರಿಸಿ ಶುಭಾಶಯ ಸಲ್ಲಿಸಿದರು. ನಂತರ ದೇವನೂರು ಎಂಟ್ರಿಯಾಗುತ್ತಿದ್ದಂತೆ ಮಾತೆಯರು ಆರತಿ ಎತ್ತಿ ಸ್ವಾಗತ ಕೋರಿದರು. ಮಕ್ಕಳು ಪೂರ್ಣ ಕುಂಭದೊಂದಿಗೆ ಸ್ವಾಗತಿಸಿದರು.
ವೇದಿಕೆಯ ಕಾರ್ಯಕ್ರಮದ ಉದ್ದಕ್ಕೂ ಮುಖ್ಯ ಅತಿಥಿಗಳು ಶಾಸಕರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.