ಚಿಕ್ಕಮಗಳೂರಿನ ತಾಲೂಕು ಕಚೇರಿಯಿಂದ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಜಾಥವನ್ನು ಶಾಸಕ ಎಚ್.ಡಿ. ತಮ್ಮಯ್ಯ ಉದ್ಘಾಟಿಸಿದರು. ಸಿ.ಟಿ.ರವಿ, ಮಂಜೇಗೌಡ ಮತ್ತಿತರರಿದ್ದರು.
- ಪ್ರಕೃತಿಯೇ ನಮ್ಮ ದೇವರು
- ಪರಿಸರವನ್ನು ಉಳಿಸಿ ಬೆಳೆಸಬೇಕು
ಚಿಕ್ಕಮಗಳೂರು: ಕಾಂಕ್ರೀಟ್ ಮನೆಗಳ ನಿರ್ಮಾಣ ಮಾಡುತ್ತಿದ್ದರೆ ಪರಿಸರ ಉಳಿಸುವುದು ಹೇಗೆ, ಪ್ರಕೃತಿಯೇ ನಮ್ಮ ದೇವರು, ಹಾಗಾಗಿ ಪರಿಸರವನ್ನು ಉಳಿಸಿ ಬೆಳೆಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶುಕ್ರವಾರ ಸಾರ್ವಜನಿಕ ಶಿಕ್ಷಣ ಇಲಾಖೆ, ಹಸಿರು ಫೌಂಡೇಶನ್ ಆಶ್ರಯದಲ್ಲಿ ನಗರದ ತಾಲೂಕು ಕಚೇರಿಯಿಂದ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಜಾಥ ಉದ್ಘಾಟಿಸಿ ಮಾತನಾಡಿದ ಅವರು, ಪ್ರಕೃತಿಯಿಂದ ಅಗತ್ಯದಷ್ಟು ಮಾತ್ರ ನಾವು ಪಡೆಯಬೇಕು. ಮನುಷ್ಯನ ದುರಾಸೆಯಿಂದ ಪ್ರಕೃತಿ ನಾಶವಾಗುತ್ತಿದೆ ಎಂದರು.
ಮಾನವನ ಜೀವನಕ್ಕೆ ಅತಿ ಅವಶ್ಯಕವಾಗಿರುವ ಆಮ್ಲಜನಕ ನೀಡುತ್ತಿರುವುದೇ ಪರಿಸರ. ಆದರೆ ಅರಣ್ಯ ನಾಶ, ವಾಯು ಮಾಲಿನ್ಯ, ಅತಿ ಹೆಚ್ಚು ಪ್ಲಾಸ್ಟಿಕ್ ಬಳಕೆ, ಮಣ್ಣಿನ ಸವಕಳಿ ಇಂತಹ ಹಲವು ಸಮಸ್ಯೆಗಳನ್ನು ನಾವುಗಳು ಎದುರಿಸುತ್ತಿz್ದೆÃವೆ ಎಂದು ಹೇಳಿದರು.
ಪ್ರಕೃತಿಯ ಮೇಲೆ ಹೆಚ್ಚು ಒತ್ತಡ ಬೀಳುತ್ತಿದೆ. ಹಾಗಾಗಿ ಮಳೆಗಾಲ, ಬೇಸಿಗೆ ಹಾಗೂ ಚಳಿಗಾಲದಲ್ಲೂ ಕೂಡ ಬದಲಾವಣೆ ಆಗಿದೆ. ಪ್ರಕೃತಿಯ ಏರುಪೇರು ಕಾಣುತ್ತಿz್ದÉÃವೆ. ನಮ್ಮ ಪೂರ್ವಜರು ಪರಿಸರ ಪ್ರಕೃತಿ ದೇವರೆಂದು ಪೂಜೆ ಮಾಡುತ್ತಿದ್ದರು. ಅದನ್ನು ಉಳಿಸುವ ಕೆಲಸ ನಮ್ಮದಾಗಬೇಕು ಎಂದರು.
ಪ್ರಪAಚದಲ್ಲಿ ಇದೇ ರೀತಿಯಲ್ಲಿ ತಾಪಮಾನ ಹೆಚ್ಚಳ ಮುಂದುವರಿದರೆ ನಮ್ಮ ಮುಂದಿನ ಪೀಳಿಗೆಗೆ ಹಸಿರು ಉಳಿಸುವುದು ಹೇಗೆ ಎಂಬ ಬಗ್ಗೆ ೧೯೭೨ರಲ್ಲಿ ವಿಶ್ವ ಸಂಸ್ಥೆಯಲ್ಲಿ ನಡೆದ ಸಭೆಯಲ್ಲಿ ಚಿಂತನೆ ಮಾಡಿದಾಗ ಪರಿಸರ ಸಂರಕ್ಷಣೆ ಅನಿವಾರ್ಯ ಎಂಬ ಕಾರಣಕ್ಕಾಗಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಇದು ಜೂನ್ ೫ಕ್ಕೆ ಮಾತ್ರ ಸೀಮಿತವಾಗಬಾರದು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ದುರಾಸೆಯಿಂದಾಗಿ ಪ್ರಕೃತಿ ನಾಶವಾಗುತ್ತಿದೆ. ಪ್ರಕೃತಿಯ ಉತ್ಪನ್ನವನ್ನು ಸ್ವೀಕಾರ ಮಾಡುತ್ತಿz್ದÉÃವೆ. ವಿಶ್ವ ಪರಿಸರ ದಿನಾಚರಣೆ ಎಲ್ಲರಲ್ಲೂ ಜಾಗೃತಿ ಮೂಡಿಸಲಿ. ನಾವು ಸೃಷ್ಟಿಯ ಭಾಗ ಸೃಷ್ಟಿ ನಮಗಾಗಿ ಅಲ್ಲ. ಹಾಗಾಗಿ ಅದನ್ನು ಸಂರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ರಾಜ್ಯ ಪರಿಸರ ಮಾಲಿನ್ಯ ಮೌಲ್ಯಮಾಪನ ಮಂಡಳಿಯ ಅಧ್ಯಕ್ಷ ಎ.ಎನ್. ಮಹೇಶ್, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಂಜೇಗೌಡ, ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ರಾಧಾಕೃಷ್ಣ, ನಗರಸಭೆಯ ಆಶ್ರಯ ಸಮಿತಿ ಸದಸ್ಯ ಮಧು, ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ, ಹಸಿರು ಫೌಂಡೇಶನ್ ಅಧ್ಯಕ್ಷ ರತನ್, ಕಿರಣ್‌ರಾಜ್ ಜಾಥದಲ್ಲಿ ಪಾಲ್ಗೊಂಡಿದ್ದರು.