ಎನ್.ಆರ್.ಪುರದಲ್ಲಿ ಆಯೋಜಿಸಿದ್ದ ಮುಂಗಾರು ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ವೈ.ಎಂ.ಲಲಿತಾ ಅವರನ್ನು ಸನ್ಮಾನಿಸಲಾಯಿತು. 
ಚಿಕ್ಕಮಗಳೂರು

ಪಾಲಕರೇ, ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ

ಎನ್.ಆರ್.ಪುರ: ಸರ್ಕಾರ ಸರ್ಕಾರಿ ಶಾಲೆಗಳಿಗೆ ಎಲ್ಲಾ ಸೌಲಭ್ಯ ಒದಗಿಸಿದ್ದು ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸಬೇಕು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣೇಶ್ ಎಂದು ಕರೆ ನೀಡಿದರು.
ಪಟ್ಟಣದ ಜ್ವಾಲಾಮಾಲಿನಿ ಬಾಲಿಕಾ ಪ್ರೌಢ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಜ್ವಾಲಾಮಾಲಿನಿ ಬಾಲಿಕಾ ಪ್ರೌಢ ಶಾಲೆ ಹಾಗೂ ಚಂದ್ರಪ್ರಭಾ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ನಡೆದ ಮುಂಗಾರು ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವೈ.ಎಂ.ಲಲಿತ ಉಪನ್ಯಾಸ ನೀಡಿ, ಹೆಣ್ಣು ಮಕ್ಕಳಿಗೆ ಮುಟ್ಟಿನ ಸಮಸ್ಯೆ ಹಾಗೂ ಪೌಷ್ಠಿಕಾಂಶದ ಕೊರತೆಯಿಂದ ಹಾರ್ಮೋನ್‌ಗಳಲ್ಲಿ ಏರುಪೇರಾಗುತ್ತದೆ. ಹೆಣ್ಣು ಮಕ್ಕಳು ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಜ್ವಾಲಾಮಾಲಿನಿ ಬಾಲಿಕಾ ಪ್ರೌಢ ಶಾಲೆ ಶಿಕ್ಷಕ ಗುಣಪಾಲ್‌ಜೈನ್ ಮಾತನಾಡಿ, ಹೆಣ್ಣು ಮಕ್ಕಳಿಗೆ ಆರೋಗ್ಯದ ಬಗ್ಗೆ ಮಾಹಿತಿ ನೀಡುತ್ತಿರುವುದು ಸಕಾಲಿಕವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿನಿಯರು ದೈಹಿಕ ಹಾಗೂ ಮಾನಸಿಕವಾಗಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸಿಎಂಎಸ್ ಸಂಚಾಲಕಿ ಸುಲೋಚನಾ, ಪ್ರಭಾರ ಪ್ರಾಚಾರ್ಯೆ ಆರ್.ಸುಜಾತ ಕುಮಾರಿ, ಕಸಾಪ ಕಸಬಾ ಹೋಬಳಿ ನೂತನ ಅಧ್ಯಕ್ಷ ತಕ್ಷಕ್ ಕುಮಾರ್, ಸಹ ಶಿಕ್ಷಕಿ ಶಾರದ ಇದ್ದರು.