ಕಲ್ಲತ್ತಿಗಿರಿಯಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಗೆದ್ದ ತಂಡಗಳಿಗೆ ಮಾಜಿ ಶಾಸಕ ಡಿ.ಎಸ್.ಸುರೇಶ್ ಬಹುಮಾನ ವಿತರಿಸಿದರು.  
ಚಿಕ್ಕಮಗಳೂರು

ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಆರೋಗ್ಯ ವೃದ್ಧಿ

ಲಿಂಗದಹಳ್ಳಿ: ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಬಹುದು. ಪ್ರತಿಯೊಬ್ಬರು ವಯಸ್ಸಿನ ಅಂತರ ಪರಿಗಣಿಸದೆ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು ಎಂದು ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದರು.
ಲಿಂಗದಹಳ್ಳಿಯ ಜಿಆರ್‌ವಿಸಿಸಿ ವತಿಯಿಂದ ಕಲ್ಲತ್ತಿಗಿರಿ ಶ್ರೀ ವಿರಭದ್ರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಜ್ಯಮಟ್ಟ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ, ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಮಳೆಗಾಲದಲ್ಲಿ ರೈತರು ತಮ್ಮ ಕೃಷಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕ ಸ್ಥರತೆ ಕಾಪಾಡಿಕೊಂಡರೆ ಬೇಸಿಗೆಯ ಸಂದರ್ಭಗಳಲ್ಲಿ ವಿವಿಧ ಕ್ರೀಡಾ ಕೂಟಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಟಿಎಪಿಸಿಎಂಎಸ್‌ನ ಮಾಜಿ ಅಧ್ಯಕ್ಷ ಗುಳ್ಳದ ಮನೆ ವಸಂತ ಕುಮಾರ್, ಲಿಂಗದಹಳ್ಳಿ ಗ್ರಾಪಂ ಮಾಜಿ ಸದಸ್ಯ ಎಲ್.ಎಂ.ಮಧು, ವೆಂಡರ್ ಜಯಣ್ಣ, ಮತ್ತು ವಿವಿಧ ವಾಲಿಬಾಲ್ ತಂಡಗಳ ಆಟಗಾರರುಗಳು ಉಪಸ್ಥತರಿದ್ದರು.