ಕಳಸದ ಅಂಬಾತೀರ್ಥ ಸಮೀಪದ ತೂಗು ಸೇತುವೆಗೆ ಪ್ರವಾಸಿಗರ ವಾಹನ ಬರದಂತೆ ಬ್ಯಾರಿಕೇಡ್ ಹಾಕಿರುವುದು.
ಶೃಂಗೇರಿ: ಮಾನವ ಜೀವನವನ್ನು ಸಾರ್ಥಕ್ಯ ಮಾಡಿಕೊಳ್ಳಬೇಕು. ನಕಾರಾತ್ಮಕ ಯೋಜನೆಗಳನ್ನು ಬದಿಗಿಟ್ಟು ಸಕಾರಾತ್ಮಕ ವಿವೇಚನೆ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಸಮಾಜದ ಉನ್ನತಿ ಸಾಧ್ಯ ಎಂದು ಎಎಸ್‌ಐ ಸಿ.ಆರ್.ಮೋಹನ್‌ಕುಮಾರ್ ತಿಳಿಸಿದರು.
ಅವರು ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಮಾದಕ ದ್ರವ್ಯಗಳ ಹಾವಳಿ ತಡೆಗಟ್ಟುವಿಕೆ ಹಾಗೂ ಕಾನೂನು ಜಾಗೃತಿ ಅರಿವು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲಿ ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ನೀಡಬೇಕು. ಮಾದಕ ವಸ್ತುಗಳಿಂದ ದೂರವಿರಬೇಕು. ಮಾದಕ ವಸ್ತುವಿನ ಸೇವನೆ ಆರೋಗ್ಯದ ಮೇಲೆ ದುಪ್ಪರಿಣಾಮ ಬೀರುತ್ತದೆ. ಭಾರತ ನಶೆ ಮುಕ್ತ ರಾಷ್ಟ್ರವಾಗಬೇಕಾದರೆ ಯುವಜನರು ಆಧ್ಯಾತ್ಮಿಕ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎ.ಕೆ.ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಹಾಗೂ ಶ್ರದ್ಧೆ ಮೈಗೂಡಿಸಿಕೊಂಡರೆ ಬದುಕಿನಲ್ಲಿ ಯಶಸ್ಸು ಗಳಿಸಲು ಸಾಧ್ಯ. ಪಾಲಕರ ಕನಸುಗಳನ್ನು ನನಸಾಗಿ ಮಾಡುವುದು ವಿದ್ಯಾರ್ಥಿಗಳ ಕರ್ತವ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಲಯದ ಸ್ನೇಹಾ, ಶಿಲ್ಪಾ ಉಪಸ್ಥಿತರಿದ್ದರು.