ಮೂಡಿಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪಠ್ಯೇತರ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ಮೋಟಮ್ಮ ಅವರನ್ನು ಸನ್ಮಾನಿಸಲಾಯಿತು.  
ಚಿಕ್ಕಮಗಳೂರು

ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ

ಮೂಡಿಗೆರೆ: ಪಾಲಕರು ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆ-ಕಾಲೇಜುಗಳಿಗೆ ಸೇರಿಸಿದರೆ ಗುಣಮಟ್ಟದ ಶಿಕ್ಷಣದ ಜತೆಗೆ ಸರ್ಕಾರದ ವಿವಿಧ ಸವಲತ್ತುಗಳು ಲಭಿಸುತ್ತದೆ ಎಂದು ಮಾಜಿ ಸಚಿವೆ ಮೋಟಮ್ಮ ಹೇಳಿದರು.
ಡಿಎಸ್‌ಬಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪಠ್ಯತರ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರು ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಸಂದರ್ಭಕ್ಕೆ ತಕ್ಕಂತೆ ದೊರೆಯುತ್ತದೆ. ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳು ಸೇರಿದೆ ಮುಚ್ಚುವ ಶಾಲೆಗಳು ಕೂಡ ಮತ್ತೆ ತೆರೆಯಲು ಸಾಧ್ಯವಿದೆ. ಸರ್ಕಾರಿ ಕಾಲೇಜುಗಳಲ್ಲಿ ಉತ್ತಮ ಬೋಧಕ ವರ್ಗ, ಗುಣಮಟ್ಟದ ಶಿಕ್ಷಣ, ಸ್ಮಾರ್ಟ ಕ್ಲಾಸ್, ಕಂಪ್ಯೂಟರ್ ಲ್ಯಾಬ್, ಮಲ್ಟಿ ಜಿಮ್, ಸಿಂಥೆಟಿಕ್ ಮ್ಯಾಟ್, 30 ಸಾವಿರಕ್ಕಿಂತ ಹೆಚ್ಚಿನ ಪುಸ್ತಕವಿರುವ ಲೈಬ್ರರಿ ಎಲ್ಲವನ್ನು ಹೊಂದಿದೆ ಎಂದರು.
4.80 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊಸ ಕಟ್ಟಡ ನಿರ್ಮಾಣ ಹಂತದಲ್ಲಿದೆ. ಇಂತಹ ಅತ್ಯುತ್ತಮ ಸರ್ಕಾರಿ ಕಾಲೇಜು ಬಿಟ್ಟು ಹೊರ ಜಿಲ್ಲೆಯ ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಸೇರಿಸುವುದು ಸರಿಯಲ್ಲ. ಹಿಂದೆ ಈ ಕಾಲೇಜಿನಲ್ಲಿ 1ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿದ್ದರು. ಈಗ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ತಾಲೂಕಿನಲ್ಲಿರುವ ಎಲ್ಲ ಪದವಿ ಪೂರ್ವ ಕಾಲೇಜ ಪ್ರಾಚಾರ್ಯರು ಮತ್ತು ಭೋದಕ ವರ್ಗದವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವಿದ್ಯಾರ್ಥಿಗಳನ್ನು ಸೇರಲು ಹುರಿದುಂಬಿಸಬೇಕು ಎಂದು ತಿಳಿಸಿದರು.