ಮೆಣಸೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೊಬಲೈಜೇಷನ್ ಾರ್ ಸುರಕ್ಷಾ ಅಭಿಯಾನ ಕಾರ್ಯಕ್ರಮದ ಕ್ಯೂಆರ್ ಕೋಡ್ ಅನಾವರಣಗೊಳಿಸಲಾಯಿತು.
ಎನ್.ಆರ್.ಪುರ: ವಿದ್ಯಾರ್ಥಿಗಳು ಎಚ್‌ಐವಿ ಸೋಂಕಿನ ಸ್ಥಿತಿಗತಿಗಳ ಬಗ್ಗೆ ಅರಿತುಕೊಳ್ಳಬೇಕು ಎಂದು ನಮ್ಮ ಕ್ಲಿನಿಕ್‌ನ ವೈದ್ಯಾಧಿಕಾರಿ ಡಾ.ಕ್ಷಮ ಹೇಳಿದರು.
ಸಾರ್ವಜನಿಕ ಆಸ್ಪತ್ರೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ ರಿಬ್ಬನ್‌ಕ್ಲಬ್ ಅಶ್ರಯದಲ್ಲಿ ನಡೆದ ಮೊಬಲೈಜೇಷನ್ ಾರ್ ಸುರಕ್ಷಾ ಅಭಿಯಾನ ಕಾರ್ಯಕ್ರಮದ ಕ್ಯೂಆರ್ ಕೋಡ್ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿ, ಹದಿಹರೆಯದವರಲ್ಲಿ ಎಚ್‌ಐವಿ ಸೋಂಕಿತ ಮತ್ತು ಏಡ್ಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ರೆಡ್ ರಿಬ್ಬನ್‌ಕ್ಲಬ್ ಪ್ರಾರಂಭಿಸಲಾಗಿದೆ. ಈ ಅಭಿಯಾನದ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಅದರಲ್ಲಿ ಬರುವ ಪ್ರಶ್ನಾವಳಿಗಳಿಗೆ ಉತ್ತರಿಸಿ ಎಚ್‌ಐವಿ ಸ್ಥಿತಿಗತಿಗಳನ್ನು ವಿದ್ಯಾರ್ಥಿಗಳು ತಿಳಿದುಕೊಂಡು ಎಚ್‌ಐವಿ ಇಂದ ದೂರವಿರಲು ಪ್ರಯತ್ನಿಸಬೇಕು ಎಂದು ತಿಳಿಸಿದರು.
ಆಪ್ತ ಸಮಾಲೋಚಕಿ ಸುಜಾತ ಕ್ಯೂಆರ್ ಕೋಡ್ ಕಾರ್ಯನಿರ್ವಹಿಸುವ ವಿಧಾನ ಸಿಪಿಲಿಸ್ ಮತ್ತು ಹೆಪಟೈಟಿಸ್ ಬಿ ರೋಗಗಳ ಕುರಿತು ಮಾಹಿತಿ ನೀಡಿದರು. ಸಂಶಯವಿರುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ಕೇಂದ್ರಕ್ಕೆ ಬಂದು ಎಚ್‌ಐವಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಗೆ ಬಲಿಯಾಗದೆ ಉತ್ತಮ ಆರೋಗ್ಯಕರ ಜೀವನ ನಡೆಸಬೇಕು. ಎಚ್‌ಐವಿ ಹರಡುವ ವಿಧಾನ, ನಿಯಂತ್ರಣ, ಮುನ್ನೆಚ್ಚರಿಕೆ ಕ್ರಮಗಳು ಮತ್ತು ಮಾದಕ ವಸ್ತು ಮುಕ್ತ ಕರ್ನಾಟಕದ ಬಗ್ಗೆ ಮಾಹಿತಿ ನೀಡಿದರು.
ಕಾಲೇಜು ಉಪನ್ಯಾಸಕ ಶಂಕರನಾಯ್ಕ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.