ಯರೇಹಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿದ್ಯುತ್ ಉಪಕೇಂದ್ರ ಕಾಮಗಾರಿಗೆ ಸಚಿವ ಕೆ.ಜೆ.ಜಾರ್ಜ್ ಭೂಮಿ ಪೂಜೆ ನೆರವೇರಿಸಿದರು. ಜಿ.ಎಚ್.ಶ್ರೀನಿವಾಸ್, ಟಿ.ಡಿ.ರಾಜೇಗೌಡ, ಡಾ.ಕೆ.ಪಿ.ಅಂಶುಮಂತ್, ರೇಖಾ ಇತರರಿದ್ದರು.
ತರೀಕೆರೆ: ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಹಣ ಪಾವತಿಸಿ ಸಕ್ರಮಗೊಳಿಸಿಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಅಕ್ರಮ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ತಾಲೂಕಿನ ನಂದಿ ಹೊಸಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ 66/11 ಕೆವಿ ವಿದ್ಯುತ್ ಉಪಕೇಂದ್ರ ಉದ್ಘಾಟನೆ ಜತೆ ಕುಸಮ-ಸಿ ಯೋಜನೆಯ ಸೌರ ವಿದ್ಯುತ್ ಘಟಕ ಶಂಕುಸ್ಥಾಪನೆ ಹಾಗೂ ಯರೇಹಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ 110/11 ಕೆವಿ ವಿದ್ಯುತ್ ಉಪಕೇಂದ್ರ ಕಾಮಗಾರಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಅಧಿಕಾರಕ್ಕೆ ಬರುವ ಮುಂಚೆ ಇದ್ದ 10 ಸಾವಿರ ಮೆಗಾವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆ ಇದೀಗ 13 ಸಾವಿರ ಮೆಗಾವ್ಯಾಟ್‌ಗೆ ಏರಿಕೆಯಾಗಿದೆ. ಈ ನಡುವೆ ಕಳೆದ ಎರಡೂವರೆ ವರ್ಷದ ಅವಧಿಯಲ್ಲಿ ಒಂದು ತಿಂಗಳಿನಷ್ಟು ಅವಧಿಯಲ್ಲಿ ವಿದ್ಯುತ್ ಸಮಸ್ಯೆ ಎದುರಾದದ್ದು ಬಿಟ್ಟರೆ ಉಳಿದಂತೆ ಅಧಿಕಾರಿ, ಸಿಬ್ಬಂದಿಯ ಅವಿರತ ಶ್ರಮದಿಂದ ಸಮಸ್ಯೆಗೆ ಪರಿಹಾರ ಸಿಕ್ಕಿದೆ ಎಂದರು.
ಕುಸುಮ್-ಸಿ ಯೋಜನೆ ಮೂಲಕ ಎರಡೂವರೆ ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಟೆಂಡರ್ ಕರೆಯಲಾಗಿದ್ದು 1 ಮೆಗಾವ್ಯಾಟ್ ಉತ್ಪಾದನೆಗೆ 1 ಎಕರೆಯಷ್ಟು ಜಾಗದ ಅವಶ್ಯಕತೆ ಇದೆ. ಭೂ ಮಾಲೀಕರು ಅಥವಾ ಸ್ಥಳೀಯ ಸಂಸ್ಥೆಗಳು ಯೋಜನೆಗೆ ಬೇಕಾದ ಜಾಗ ಲೀಸಿಗೆ ನೀಡಿದರೆ, ಟೆಂಡರ್‌ದಾರರ ಮೂಲಕ 25 ಸಾವಿರ ರೂ. ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.
3-4 ಪಂಪ್‌ಸೆಟ್‌ಗಳಿಗಷ್ಟೇ ಸಂಪರ್ಕ ಪಡೆದುಕೊಳ್ಳಬಹುದಾದ ಸಾಮರ್ಥ್ಯವಿರುವ ವಿದ್ಯುತ್ ಪರಿವರ್ತಕಗಳಿಂದ ಹೆಚ್ಚುವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಸಿಕೊಳ್ಳುತ್ತಿರುವುದು ಸಮಸ್ಯೆ ಉಂಟು ಮಾಡುತ್ತಿದೆ. ಸುಟ್ಟ ಟಿಸಿ ದುರಸ್ತಿಗೊಳಿಸುವುದೇ ದೊಡ್ಡ ಕೆಲಸವಾಗಿದೆ ಎಂದು ಹೇಳಿದರು.
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಗ್ರಾಪಂ ಅಧ್ಯಕ್ಷರಾದ ರೇಖಾ, ಎನ್.ಆರ್.ಶ್ರುತಿ, ಡಿಸಿ ಎನ್.ಎಂ.ನಾಗರಾಜ್, ಎಸ್ಪಿ ಜಿತೇಂದ್ರಕುಮಾರ್, ಎಸಿ ಎನ್.ನಟೇಶ್, ಅಧೀಕ್ಷಕ ಇಂಜಿನಿಯರ್ ಕೆ.ಸುರೇಶ್, ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಮಂಜುನಾಥ್ ಮತ್ತಿತರರಿದ್ದರು.
12 ಟಿಕೆಇ 1:ಯರೇಹಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿದ್ಯುತ್ ಉಪಕೇಂದ್ರ ಕಾಮಗಾರಿಗೆ ಸಚಿವ ಕೆ.ಜೆ.ಜಾರ್ಜ್ ಭೂಮಿ ಪೂಜೆ ನೆರವೇರಿಸಿದರು. ಜಿ.ಎಚ್.ಶ್ರೀನಿವಾಸ್, ಟಿ.ಡಿ.ರಾಜೇಗೌಡ, ಡಾ.ಕೆ.ಪಿ.ಅಂಶುಮಂತ್, ರೇಖಾ ಇತರರಿದ್ದರು.