ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಪೂರ್ವಭಾವಿ ಸಭೆ ನಡೆಯಿತು.  
ಚಿಕ್ಕಮಗಳೂರು

ರೇಣುಕಾಚಾರ್ಯ ಜಯಂತಿ ಪೂರ್ವಭಾವಿ ಸಭೆ 9ಕ್ಕೆ

ಬಾಳೆಹೊನ್ನೂರು: ರಂಭಾಪುರಿ ಪೀಠದಲ್ಲಿ 27ರಿಂದ ಮಾ.3 ರವರೆಗೆ ನಡೆಯಲಿರುವ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಪೂರ್ವಭಾವಿ ಸಿದ್ಧತೆಗಾಗಿ ಸಭೆಯನ್ನು 9ರಂದು ಶ್ರೀಪೀಠದ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದರು.
ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವದ ಅಂಗವಾಗಿ ಶ್ರೀರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಶ್ರೀಪೀಠದಲ್ಲಿ ನಡೆದ ಬಾಳೆಹೊನ್ನೂರು ಪಟ್ಟಣದ ಪ್ರಮುಖರ ಸಭೆಯಲ್ಲಿ ಆಶೀರ್ವಚನ ನೀಡಿ, ಜಾತ್ರಾ ಮಹೋತ್ಸವದ ಪೂರ್ವಭಾವಿ ಸಿದ್ಧತೆಗಾಗಿ ಚರ್ಚಿಸಲು 9ರ ಸೋಮವಾರ ಬೆಳಗ್ಗೆ 11ಗಂಟೆಗೆ ಯಡಿಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ ಮತ್ತು ಸಿದ್ಧರಬೆಟ್ಟ ಕ್ಷೇತ್ರದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ಬಾಳೆಹೊನ್ನೂರು ನಾಗರಿಕ ಸಮಾಜದವರ ಜತೆ ಮತ್ತೊಂದು ಸುತ್ತಿನ ಸಮಾಲೋಚನಾ ಸಭೆ ಆಯೋಜಿಸಲಾಗಿದೆ. ಈ ಸಭೆಯಲ್ಲಿ ಬಾಳೆಹೊನ್ನೂರಿನ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಪ್ರಮುಖರು ಭಾಗವಹಿಸಿ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ಜಗದ್ಗುರುಗಳು ತಿಳಿಸಿದರು.
ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್.ಚನ್ನಕೇಶವಗೌಡ, ಕಾಫಿ ಬೆಳೆಗಾರ ಎಚ್.ಬಿ.ರಾಜಗೋಪಾಲ್, ಕೆ.ಎನ್.ಮರಿಗೌಡ, ಟಿ.ಎಂ.ನಾಗೇಶ್ ಕಲ್ಮಕ್ಕಿ, ಕಾಫಿ ಮಂಡಳಿ ಮಾಜಿ ಸದಸ್ಯ ಬಿ.ಎನ್.ಭಾಸ್ಕರ್, ಗ್ರಾಪಂ ಮಾಜಿ ಅಧ್ಯಕ್ಷ ಎಂ.ಎಸ್.ಅರುಣೇಶ್, ಮಹಮ್ಮದ್ ಹನ್ೀ, ಪ್ರಮುಖರಾದ ಹಿರಿಯಣ್ಣ, ಕೆ.ಟಿ.ವೆಂಕಟೇಶ, ಸನತ್‌ಶೆಟ್ಟಿ, ಬಿ.ಜಗದೀಶ್ಚಂದ್ರ, ಕೋಕಿಲ ಲಿಂಗಪ್ಪಗೌಡ, ಮಹೇಶ್ ಆಚಾರ್ಯ, ತಿಮ್ಮಯ್ಯ, ಆನಂದ್ ಇದ್ದರು.