ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಉದ್ಘಾಟಿಸಿದರು. ಸುನೀತಾ, ಎಸ್.ಪರಮೇಶ್, ಪರಮೇಶ್ವರಪ್ಪ, ಮಮತಾ ಇತರರಿದ್ದರು. 
ಚಿಕ್ಕಮಗಳೂರು

ಕುಮಾರವ್ಯಾಸ ಭಾರತದಲ್ಲಿ ಸಾಮಾಜಿಕ ಚಿತ್ರಣ (kasapa)

ತರೀಕೆರೆ: ಕುಮಾರವ್ಯಾಸ ಭಾರತದಲ್ಲಿ ಸಮಗ್ರ ಸಾಮಾಜಿಕ ಚಿತ್ರಣ ಕಾಣಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಆಯೋಜಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾಡಿನ ಸಾಂಸ್ಕೃತಿಕ ರಾಯಭಾರಿ ಕುಮಾರವ್ಯಾಸರು ಕೃತಿಗಳಲ್ಲಿ ಹಾಸ್ಯ, ವಿಡಂಬನೆ, ರಾಜಕೀಯ ಪ್ರಕಾರಗಳನ್ನು ಸ್ಥೂಲವಾಗಿ ಚಿತ್ರಿಸಿದ್ದಾರೆ ಎಂದರು.
ತರೀಕೆರೆ ತಾಲೂಕು ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಸುನೀತಾ ಅವರು ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಪಠ್ಯಾಧಾರಿತ ಕುಮಾರವ್ಯಾಸ ಭಾರತದ ಪ್ರಸಂಗಗಳನ್ನು ವಿವರಿಸಿ ಗಮಕದ ಮೂಲಕ ವಾಚನ ಮಾಡಿ ವ್ಯಾಖ್ಯಾನಿಸಿದರು.
ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ಪದ ಅಂದವಾಗಿ ಬರೆದ ಮಕ್ಕಳಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು. ಕಡೂರು ತಾಲೂಕು ಕಸಾಪ ಅಧ್ಯಕ್ಷ ಎಸ್.ಪರಮೇಶ್, ಸೊಲ್ಲಾಪುರ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಪರಮೇಶ್ವರಪ್ಪ, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಮಮತಾ ಮತ್ತಿತರರಿದ್ದರು.