ಕೊಪ್ಪದ ಕಮ್ಮರಡಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಶಿವಪ್ಪ ಗೌಡ ಉದ್ಘಾಟಿಸಿದರು.  
ಚಿಕ್ಕಮಗಳೂರು

ಕ್ರೀಡೆಗಳಿಗಿದೆ ಜಗತ್ತನ್ನು ಒಟ್ಟುಗೂಡಿಸುವ ಶಕ್ತಿ

ಕೊಪ್ಪ: ಕ್ರೀಡೆಗೆ ಜಗತ್ತನ್ನು ಒಟ್ಟುಗೂಡಿಸುವ ಸಾಮರ್ಥ್ಯವಿದೆ. ಮಕ್ಕಳು ತಮಗೆ ಆಸಕ್ತಿ ಇರುವ ಕ್ರೀಡೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವುದರಿಂದ ದೇಶವನ್ನು ಪ್ರತಿನಿಧಿಸುವ ಅವಕಾಶ ಲಭಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಆರತಿ ಕೃಷ್ಣ ಹೇಳಿದರು.
ಕಮ್ಮರಡಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಮಾತನಾಡಿ, ಶಾಲಾ ದಿನಗಳಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಾಗ ಮಾನಸಿಕ ಹಾಗೂ ದೈಹಿಕವಾಗಿ ಹೆಚ್ಚು ಸದೃಢರಾಗುತ್ತೇವೆ ಎಂದರು.
ಭದ್ರಾ ಕಾಡ ನಿಗಮದ ಅಧ್ಯಕ್ಷ ಕೆ.ಪಿ. ಅಂಶುಮಂತ್ ಮಾತನಾಡಿ, ಪ್ರತಿಯೊಬ್ಬರಲ್ಲಿಯೂ ಕೌಶಲ್ಯ, ವಿಚಾರಗಳು ಇವೆ. ಪ್ರದರ್ಶನ ಮಾಡಲು ಪ್ರತಿಭಾ ಕಾರಂಜಿ, ಕ್ರೀಡಕೂಟಗಳು ಸಹಕಾರಿಯಾಗುತ್ತಿದೆ. ವಿದ್ಯಾರ್ಥಿಗಳು ಶಾಲೆಗೆ ತೆರಳಲು ಸರ್ಕಾರ ಉಚಿತ ಬಸ್ ಪಾಸ್ ನೀಡುತ್ತಿದೆ. ಯುವಕರಿಗೆ ಒಳಿತು ಮಾಡುವ ಉದ್ದೇಶದಿಂದ ಭಾರತ್ ಜೋಡೋ ಯುವಕ ಸಂಘ ಸ್ಥಾಪನೆ ಮಾಡಿದೆ ಎಂದರು.
ಹಿರಿಯರಾದ ಶಿವಪ್ಪ ಗೌಡ ಹಾಗೂ ಕ್ರೀಡಾಕೂಟ ಸಮಿತಿ ಅಧ್ಯಕ್ಷ ಕುಸೂರಿಗೆ ಸಾಯಿನಾಥ್‌ರನ್ನು ಗೌರವಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಭಾಸ್ಕರ್, ಇಒ ನವೀನ್ ಕುಮಾರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಓಣಿತೋಟ ರತ್ನಾಕರ್, ಪ್ರಮುಖರಾದ ದಿನೇಶ್ ಕಡ್ತೂರು ಇದ್ದರು.